ADVERTISEMENT

ರಾಜಸ್ಥಾನದಲ್ಲಿ ಮತ್ತೊಂದು ಭೀಕರ ಅಪಘಾತ: 12 ಮಂದಿ ಸಾವು

ಪಿಟಿಐ
Published 3 ನವೆಂಬರ್ 2025, 11:32 IST
Last Updated 3 ನವೆಂಬರ್ 2025, 11:32 IST
<div class="paragraphs"><p>ಅಪಘಾತ</p></div>

ಅಪಘಾತ

   

–ಪ್ರಾತಿನಿಧಿಕ ಚಿತ್ರ

ಜೈಪುರ: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಇಂದು (ಸೋಮವಾರ) ಸಂಭವಿಸಿದ ಅಪಘಾತದಲ್ಲಿ 19 ಮಂದಿ ಮೃತಪಟ್ಟ ಘಟನೆಯ ನಡುವೆಯೇ, ರಾಜಸ್ಥಾನದ ಜೈಪುರದ ಹರ್ಮದಾ ಪ್ರದೇಶದಲ್ಲಿ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 12 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಲೋಹಾ ಮಂಡಿ ಬಳಿ ವೇಗವಾಗಿ ಬಂದ ಟಿಪ್ಪರ್‌ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ ಎಂದು ಜೈಪುರ ಜಿಲ್ಲಾಧಿಕಾರಿ ಜಿತೇಂದ್ರ ಸೋನಿ ತಿಳಿಸಿದ್ದಾರೆ.

ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಎಸ್‌ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ನಿಂತಿದ್ದ ಟ್ರಕ್‌ಗೆ ಟೆಂಪೊ ಟ್ರಾವೆಲರ್‌ ಡಿಕ್ಕಿ;15 ಮಂದಿ ಸಾವು

ರಾಜ್ಯದ ಫಲೋಡಿ ಜಿಲ್ಲೆ ಮತೋಡಾ ಗ್ರಾಮದ ಬಳಿ ನಿಂತಿದ್ದ ಟ್ರಕ್‌ವೊಂದಕ್ಕೆ ಟೆಂಪೊ ಟ್ರಾವೆಲರ್‌ ಡಿಕ್ಕಿ ಹೊಡೆದ ಪರಿಣಾಮ 10 ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ 15 ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದ ಪ್ರಕರಣ ಭಾನುವಾರ ನಡೆದಿತ್ತು.

‘ಮೃತರು ಜೋಧಪುರ ನಿವಾಸಿಗಳಾಗಿದ್ದು, ಬಿಕಾನೇರ್‌ನಲ್ಲಿರುವ ಕೋಲಾಯತ್ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿತ್ತು.

ಬಸ್‌ಗೆ ಡಿಕ್ಕಿಯಾದ ಟಿಪ್ಪರ್: 19 ಸಾವು

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಇಂದು ಬೆಳ್ಳಿಗೆ ಟಿಪ್ಪರ್‌ ಮತ್ತು ಬಸ್‌ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ 10 ಮಂದಿ ಮಹಿಳೆಯರು ಸೇರಿದಂತೆ 19 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.