ADVERTISEMENT

ಅಕ್ರಮ ಸಂಬಂಧ ಇದೆ ಎಂದು ವಿಧವೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಮಹಿಳೆಯರ ಗುಂಪು

ಪಿಟಿಐ
Published 1 ಜುಲೈ 2023, 12:32 IST
Last Updated 1 ಜುಲೈ 2023, 12:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜೈಪುರ: ಅಕ್ರಮ ಸಂಬಂಧ ಇದೆ ಎಂದು ಆರೋಪಿಸಿ ವಿಧವೆಯೊಬ್ಬರನ್ನು ಮಹಿಳೆಯರ ಗುಂಪೊಂದು ಮರಕ್ಕೆ ಕಟ್ಟಿ ಹಾಕಿ ಥಳಿಸಿ. ತಲೆ ಬೋಳಿಸಿದ ಅಮಾನವೀಯ ಘಟನೆ ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ನಡೆದಿದೆ.

ಸುಮಾರು 12ರಷ್ಟು ಮಹಿಳೆಯರು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉದಯಪುರದ ಬೆಕಾರಿಯಾ ಪೊಲೀಸ್‌ ಠಾಣೆ ವ್ಯಾಪ್ತಿಯ ದೇವ್ಲಾ ಗ್ರಾಮದಲ್ಲಿ ಜೂನ್ 29 ಈ ಘಟನೆ ನಡೆದಿದ್ದು, ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬಳಿಕ ಪೊಲೀಸರ ಗಮನಕ್ಕೆ ಬಂದಿದೆ.

ADVERTISEMENT

ಐಟಿ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ತಂಡವನ್ನು ಕಳುಹಿಸಲಾಗಿದೆ. ಸಂತ್ರಸ್ತೆಗೆ ಸಾಧ್ಯ ಇರುವ ಎಲ್ಲಾ ಸಹಾಯವನ್ನೂ ಮಾಡಲಾಗುವುದು ಎಂದು ಉದಯಪುರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭುವನ್‌ ಭೂಷಣ್‌ ಯಾದವ್‌ ತಿಳಿಸಿದ್ದಾರೆ.

ಸಂತ್ರಸ್ತೆ ಟೈಲರ್‌ ಆಗಿ ದುಡಿಯುತ್ತಿದ್ದು, ವರ್ಷದ ಹಿಂದೆ ಗಂಡ ಮೃತಪಟ್ಟಿದ್ದರು. ಅವರಿಗೆ 5 ವರ್ಷದ ಮಗುವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.