ADVERTISEMENT

ರಾಜಸ್ಥಾನದ ನಂದಿನಿ ಗುಪ್ತಾಗೆ ಫೆಮಿನಾ ಮಿಸ್ ಇಂಡಿಯಾ ಕಿರೀಟ 

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಏಪ್ರಿಲ್ 2023, 7:13 IST
Last Updated 16 ಏಪ್ರಿಲ್ 2023, 7:13 IST
ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023ರ ಕಾರ್ಯಕ್ರಮದಲ್ಲಿ ನಂದಿನಿ ಗುಪ್ತಾ
ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023ರ ಕಾರ್ಯಕ್ರಮದಲ್ಲಿ ನಂದಿನಿ ಗುಪ್ತಾ    

ಮುಂಬೈ: ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023ರ ಕಿರೀಟವನ್ನು ರಾಜಸ್ಥಾನದ ನಂದಿನಿ ಗುಪ್ತಾ ಮುಡಿಗೇರಿಸಿಕೊಂಡಿದ್ದಾರೆ.

ಶನಿವಾರ ಮಣಿಪುರದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ 19 ವರ್ಷದ ನಂದಿನಿ ಗುಪ್ತಾ, ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023’ರ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ದೆಹಲಿಯ ಶ್ರೇಯಾ ಪೂಂಜಾ ಮೊದಲ ರನ್ನರ್ ಆಪ್, ಹಾಗೂ ಮಣಿಪುರದ ತೌನೊಜಮ್ ಸ್ಟ್ರೆಲಾ ಲುವಾಂಗ್ 2 ನೇ ರನ್ನರ್ ಆಗಿ ಹೊರಹೊಮ್ಮಿದ್ದಾರೆ.

ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯಲಿರುವ ‘ಗ್ರ್ಯಾಂಡ್ ಮಿಸ್ ವರ್ಲ್ಡ್’ ಸ್ಪರ್ಧೆಯ 71ನೇ ಆವೃತ್ತಿಯಲ್ಲಿ ಭಾರತವನ್ನು ನಂದಿನಿ ಪ್ರತಿನಿಧಿಸಲಿದ್ದಾರೆ.

ADVERTISEMENT

ನಂದಿನಿ ಗುಪ್ತಾ ಅವರು ವಾಣಿಜ್ಯ ವಿಭಾಗದಲ್ಲಿ ಪದವಿ ಪಡೆದುಕೊಂಡಿದ್ದಾರೆ.

ಮಿಸ್‌ ಇಂಡಿಯಾ ಸಂಸ್ಥೆಯ ಪ್ರಕಾರ, ರತನ್ ಟಾಟಾ ಅವರು ನಂದಿನಿಯ ಜೀವನದಲ್ಲಿ ಅತ್ಯಂತ ಪ್ರಭಾವ ಬೀರಿದ ವ್ಯಕ್ತಿ. ಅವರ ಮಾನವೀಯತೆ ಹಾಗೂ ದಾನ ಮಾಡುವ ಗುಣ ಹೆಚ್ಚು ಇಷ್ಟಪಡುತ್ತಾರೆ. ಪ್ರಿಯಾಂಕ ಚೋಪ್ರಾ ಅವರ ಸಾಧನೆಗಳಿಂದ ನಂದಿನಿ ಹೆಚ್ಚು ಸ್ಫೂರ್ತಿ ಪಡೆದುಕೊಂಡಿದ್ದಾರೆಂದು ಸಂದರ್ಶನ ಒಂದರಲ್ಲಿ ತಿಳಿಸಿದೆ.

‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023’ರ 59ನೇ ಆವೃತ್ತಿಯಲ್ಲಿ ನಂದಿನಿ ಗುಪ್ತಾ ಕಿರೀಟ ಗೆದ್ದುಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಾಲಿವುಡ್‌ ನಟ ಕಾರ್ತಿಕ್ ಆರ್ಯನ್ ಮತ್ತು ಅನನ್ಯ ಪಾಂಡೆ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.