
ಪ್ರಜಾವಾಣಿ ವಾರ್ತೆ
ತಿರುವನಂತಪುರ (ಪಿಟಿಐ): ಕೇರಳ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದರು.
ಭಾನುವಾರ ನೇಮಮ್‌ನಲ್ಲಿ ಪಕ್ಷದ ಚುನಾವಣಾ ಪ್ರಚಾರ ಆರಂಭಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವಿರಾ ಎಂಬ ಪ್ರಶ್ನೆಗೆ, ‘ಅದು ನನ್ನಾಸೆಯೂ ಹೌದು. ರಾಷ್ಟ್ರೀಯ ನಾಯಕತ್ವವು ಅದನ್ನು ನಿರ್ಧರಿಸುತ್ತದೆ. ತಿರುವನಂತಪುರದಲ್ಲಿ ಬದಲಾವಣೆ ತರುವುದು ನನ್ನ ಗುರಿ’ ಎಂದರು.
‘ನೇಮಮ್ ಕ್ಷೇತ್ರದಲ್ಲೂ ಬದಲಾವಣೆ ತರಲು ಬಯಸಿದ್ದೇನೆ. ಅದಕ್ಕಾಗಿ ಪಕ್ಷವು ಅವಕಾಶ ನೀಡಲಿದೆ ಎಂಬ ವಿಶ್ವಾಸವಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.