ADVERTISEMENT

ನಳಿನಿಗೆ ಖುದ್ದು ವಾದ ಮಂಡನೆಗೆ ಅವಕಾಶ

ಪಿಟಿಐ
Published 11 ಜೂನ್ 2019, 20:00 IST
Last Updated 11 ಜೂನ್ 2019, 20:00 IST
   

ಚೆನ್ನೈ:ರಾಜೀವ್‌ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರಣ್‌ಗೆ ತನ್ನ ಪರ ಖುದ್ದು ವಾದ ಮಂಡಿಸುವ ಹಕ್ಕನ್ನು ತಿರಸ್ಕರಿಸಲು ಸಾಧ್ಯವಿಲ್ಲ ಎಂದು ಮದ್ರಾಸ್‌ ಹೈಕೋರ್ಟ್‌ಅಭಿಪ್ರಾಯಪಟ್ಟಿದೆ.

ತನ್ನ ಮಗಳ ಮದುವೆಗಾಗಿಸಿದ್ಧತೆ ಮಾಡಿಕೊಳ್ಳಲು ಆರು ತಿಂಗಳು ರಜೆ ನೀಡಬೇಕು ಎಂದುಕೋರಿ ನಳಿನಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಂಬಂಧಿಸಿದಂತೆ ಖುದ್ದುವಾದ ಮಂಡಿಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು.

ಈ ಬಗ್ಗೆ ನ್ಯಾಯಾಲಯದ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸರ್ಕಾರಿ ವಕೀಲರು, ಭದ್ರತಾ ವ್ಯವಸ್ಥೆಯ ಬಗ್ಗೆ ಸರ್ಕಾರದಿಂದ ಸೂಚನೆಗಳನ್ನು ಪಡೆಯಲು ಕಾಲಾವಕಾಶ ನೀಡಬೇಕು ಎಂದು ಕೋರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.