ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿ, ಅವಧಿಪೂರ್ವ ಬಿಡುಗಡೆಯನ್ನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಅಕ್ಟೋಬರ್ 17ಕ್ಕೆ ಮುಂದೂಡಿತು.
ಸಮಯದ ಕೊರತೆಯಿಂದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರಿದ್ದ ನ್ಯಾಯಪೀಠ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲಿಲ್ಲ.ನಳಿನಿ ಸೇರಿ ಏಳು ಅಪರಾಧಿಗಳು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದು, 23 ವರ್ಷದಿಂದ ಜೈಲಿನಲ್ಲಿದ್ದಾರೆ.
ತಮಿಳುನಾಡು ಸರ್ಕಾರ ಅವಧಿಪೂರ್ವದಲ್ಲಿ ಬಿಡುಗಡೆ ಮಾಡುವುದರ ಪರವಾಗಿದ್ದು, ಪ್ರಕರಣದ ಏಳು ಅಪರಾಧಿಗಳ ಕ್ಷಮಾದಾನ ಅರ್ಜಿ ಕುರಿತು ಸಂವಿಧಾನದ 161ನೇ ವಿಧಿಯಡಿ ದತ್ತವಾಗಿರುವ ಅಧಿಕಾರ ಬಳಸಿ ತೀರ್ಮಾನಿಸಬೇಕು ಎಂದು ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು.
ಅಲ್ಲದೆ, ಈ ಸಂಬಂಧ ಎರಡು ಪ್ರತ್ಯೇಕ ಪ್ರಮಾಣಪತ್ರಗಳನ್ನು ಸೆ. 9, 2018ರಲ್ಲಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.