ADVERTISEMENT

ಲಖನೌದಲ್ಲಿ ಎರಡು ಕೋವಿಡ್ ಆಸ್ಪತ್ರೆ ನಿರ್ಮಾಣ: ಡಿಆರ್‌ಡಿಒಗೆ ರಾಜನಾಥ್ ಸೂಚನೆ

ಉತ್ತರ ಪ್ರದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ

ಪಿಟಿಐ
Published 16 ಏಪ್ರಿಲ್ 2021, 10:46 IST
Last Updated 16 ಏಪ್ರಿಲ್ 2021, 10:46 IST
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್   

ನವದೆಹಲಿ: ಲಖನೌದಲ್ಲಿ ತಲಾ 250ರಿಂದ 300 ಹಾಸಿಗೆ ಸಾಮರ್ಥ್ಯವುಳ್ಳ ಎರಡು ಕೋವಿಡ್–19 ಆಸ್ಪತ್ರೆಗಳನ್ನು ನಿರ್ಮಿಸುವಂತೆ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಗೆ (ಡಿಆರ್‌ಡಿಒ) ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಂಗ್ ಅವರ ಸೂಚನೆಯಂತೆ ಡಿಆರ್‌ಡಿಒ ತಂಡವು ಶುಕ್ರವಾರ ಲಖನೌ ತಲುಪಿದ್ದು, ನಗರದ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಕೋವಿಡ್ ಆಸ್ಪತ್ರೆಗಳನ್ನು ನಿರ್ಮಿಸಲಾಗುವುದು ಎಂದೂ ಮೂಲಗಳು ಖಚಿತಪಡಿಸಿವೆ.

ಉತ್ತರ ಪ್ರದೇಶದಲ್ಲಿ ಗುರುವಾರ 22,439 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 104 ಮಂದಿ ಸಾವನ್ನಪ್ಪಿದ್ದರು. ಉತ್ತರ ಪ್ರದೇಶದಲ್ಲಿ ಇದುವರೆಗೆ ಒಟ್ಟು 7,66,360 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದುವರೆಗೆ ಒಟ್ಟು 9,480 ಮಂದಿ ಸಾವಿಗೀಡಾಗಿದ್ದಾರೆ.

ADVERTISEMENT

ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ನಿಭಾಯಿಸುವ ಸಲುವಾಗಿ ಲಖನೌದಲ್ಲಿ ಒಂದು ಸಾವಿರ ಹಾಸಿಗೆ ಸಾಮರ್ಥ್ಯವುಳ್ಳ ತಾತ್ಕಾಲಿಕ ಕೋವಿಡ್ ಆಸ್ಪತ್ರೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.