ADVERTISEMENT

ಚೀನಾ ಗಡಿ ಸಮೀಪ 'ಶಸ್ತ್ರ' ಪೂಜೆ ನೆರವೇರಿಸಿದ ರಕ್ಷಣಾ ಸಚಿವ ರಾಜನಾಥ ಸಿಂಗ್

ಪಿಟಿಐ
Published 24 ಅಕ್ಟೋಬರ್ 2023, 9:37 IST
Last Updated 24 ಅಕ್ಟೋಬರ್ 2023, 9:37 IST
ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್
ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್   

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಸೇನಾ ಯೋಧರೊಂದಿಗೆ 'ಶಸ್ತ್ರ' ಪೂಜೆ ನೆರವೇರಿಸಿದರು. 

ಈ ಸಂದರ್ಭದಲ್ಲಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಸೇರಿದಂತೆ ಹಿರಿಯ ರಕ್ಷಣಾ ಆಧಿಕಾರಿಗಳು ಹಾಜರಿದ್ದರು. ಇದೇ ವೇಳೆ ಸೇನಾ ಯೋಧರ ಜೊತೆ, ಅರುಣಾಚಲ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್ಎಸಿ) ಉದ್ದಕ್ಕೂ ಭಾರತದ ಮಿಲಿಟರಿ ಸನ್ನದ್ಧತೆಯ ಸಮಗ್ರ ಪರಿಶೀಲನೆ ನಡೆಸಿದರು.

ಗಡಿ ಭಾಗದಲ್ಲಿ ಸೈನಿಕರ ಸೇವೆಯನ್ನು ಶ್ಲಾಘಿಸಿದರು. ದೇಶ ಪ್ರೇಮ, ಗಡಿ ಕಾಯುವ ಬದ್ಧತೆ ಮತ್ತು ಸೈನಿಕರ ಧೈರ್ಯವನ್ನು ಕೊಂಡಾಡಿದರು. 

ADVERTISEMENT

ಪ್ರತಿ ವರ್ಷ ವಿಜಯದಶಮಿಯ ದಿನ ಸಚಿವ ರಾಜನಾಥ ಸಿಂಗ್ ಅವರು ಭಾರತೀಯ ಗಡಿ ಪ್ರದೇಶಗಳಿಗೆ ಆಗಮಿಸಿ 'ಶಸ್ತ್ರ' ಪೂಜೆ ಮಾಡುತ್ತಾರೆ. ಕಳೆದ ಕೆಲ ವರ್ಷಗಳಿಂದ ಅರುಣಾಚಲ ಪ್ರದೇಶದ ತವಾಂಗ್‌ಗೆ ಬಂದು 'ಶಸ್ತ್ರ' ಪೂಜೆ ಮಾಡುತ್ತಿದ್ದಾರೆ. ಈ ಪ್ರದೇಶ ಚೀನಾದ ಗಡಿಯನ್ನು ಹಂಚಿಕೊಂಡಿದೆ. 

ಕಳೆದ ಕೆಲವು ವರ್ಷಗಳಲ್ಲಿ ಪೂರ್ವ ಲಡಾಕ್‌ನಲ್ಲಿ ಭಾರತ ಹಾಗೂ ಚೀನಾ ನಡುವೆ ಸಂಘರ್ಷ ಏರ್ಪಟ್ಟಿರುವಂತೆಯೇ ವಾಸ್ತವ ನಿಯಂತ್ರಣ ರೇಖೆಯ (ಎಲ್‌ಎಸಿ) ಸಮೀಪದ ಸೇನಾ ನೆಲೆಯಲ್ಲಿ ರಾಜನಾಥ ಸಿಂಗ್ ಸೈನಿಕರೊಂದಿಗೆ ದಸರಾ ಹಬ್ಬ ಆಚರಿಸಿರುವುದು ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ರಾಜನಾಥ ಸಿಂಗ್ ಅವರು, ಹಿಂದಿನ ಎನ್‌ಡಿಎ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದಾಗಲೂ ದಸರಾ ಸಂದರ್ಭದಲ್ಲಿ ಇಲ್ಲಿಗೆ ಬಂದು ಶಸ್ತ್ರ ಪೂಜೆಯಲ್ಲಿ ಭಾಗಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.