ADVERTISEMENT

ರಷ್ಯಾ ಪ್ರವಾಸಕ್ಕೆ ತೆರಳಿದ ರಾಜನಾಥ್‌ ಸಿಂಗ್‌

ಪಿಟಿಐ
Published 22 ಜೂನ್ 2020, 11:28 IST
Last Updated 22 ಜೂನ್ 2020, 11:28 IST
ರಾಜನಾಥ್‌ ಸಿಂಗ್‌
ರಾಜನಾಥ್‌ ಸಿಂಗ್‌   

ನವದೆಹಲಿ : ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಮೂರು ದಿನಗಳ ರಷ್ಯಾ ಪ್ರವಾಸಕ್ಕೆ ಸೋಮವಾರ ತೆರಳಿದರು.

ಪ್ರವಾಸದ ಸಂದರ್ಭದಲ್ಲಿ ರಷ್ಯಾ ಸೇನೆಯ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ. ಎರಡನೇ ಮಹಾಯುದ್ಧದಲ್ಲಿ ಜರ್ಮನಿ ವಿರುದ್ಧ ಸೋವಿಯತ್‌ ಒಕ್ಕೂಟ ವಿಜಯದ 75ನೇ ವರ್ಷಾಚರಣೆ ಅಂಗವಾಗಿ ಮಾಸ್ಕೊದಲ್ಲಿ ನಡೆಯಲಿರುವ ಸೇನೆಯ ಪಥಸಂಚಲನ ಕಾರ್ಯಕ್ರಮದಲ್ಲೂ ರಾಜನಾಥ್‌ ಸಿಂಗ್‌ ಭಾಗವಹಿಸಲಿದ್ದಾರೆ.

ಭಾರತ ಮತ್ತು ಚೀನಾ ನಡುವೆ ಗಡಿ ಸಮಸ್ಯೆ ಉಲ್ಬಣಿಸಿರುವ ಈ ಸಂದರ್ಭದಲ್ಲಿ ರಕ್ಷಣಾ ಸಚಿವರ ರಷ್ಯಾ ಭೇಟಿ ಮಹತ್ವ ಪಡೆದುಕೊಂಡಿದೆ.

ADVERTISEMENT

‘ರಷ್ಯಾದೊಂದಿಗೆ ಭಾರತವು ದಶಕಗಳಷ್ಟು ಹಳೆಯ ಸಂಬಂಧ ಹೊಂದಿದೆ. ಅಲ್ಲಿನ ಸೇನೆಯ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದು, ಅದನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ ಸಿಂಗ್‌ ತೆರಳಿದ್ದಾರೆ. ಚೀನಾ ಜೊತೆಗಿನ ವಿವಾದದ ಹೊರತಾಗಿಯೂ, ರಷ್ಯಾ– ಭಾರತದ ರಕ್ಷಣಾ ಸಂಬಂಧ ಮತ್ತು ಕಾರ್ಯತಂತ್ರದ ಸಹಭಾಗಿತ್ವವನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಲಿದ್ದಾರೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೊರೊನಾ ವೈರಸ್‌ ವ್ಯಾಪಕವಾಗುತ್ತಿರುವುದರಿಂದ ವಿದೇಶ ಪ್ರವಾಸಕ್ಕೆ ನಿರ್ಬಂಧ ಹೇರಲಾಗಿತ್ತು. ನಾಲ್ಕು ತಿಂಗಳ ಅವಧಿಯಲ್ಲಿ ಕೇಂದ್ರದ ಹಿರಿಯ ಸಚಿವರೊಬ್ಬರು ವಿದೇಶಕ್ಕೆ ತೆರಳುತ್ತಿರುವುದು ಇದೇ ಮೊದಲು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.