ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಮಾತುಕತೆ ನಡೆಯುವುದಾದರೆ ಅದು ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ)ಬಗ್ಗೆ ಮಾತ್ರ ಎಂದುರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಹರಿಯಾಣದ ಕಲ್ಕಾದಲ್ಲಿ ನಡೆದರ‍್ಯಾಲಿಯಲ್ಲಿರಾಜನಾಥ ಸಿಂಗ್ ಈ ರೀತಿ ಹೇಳಿದ್ದಾರೆ.ಹರಿಯಾಣದಲ್ಲಿ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಜನ್ ಆಶೀರ್ವಾದ್ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.
ಜಮ್ಮು ಮತ್ತು ಕಾಶ್ಮೀರದಅಭಿವೃದ್ಧಿಗಾಗಿ ಸಂವಿಧಾನದ 370ನೇ ವಿಧಿಯನ್ನು ರದ್ದು ಮಾಡಲಾಗಿದೆ. ಭಾರತ ತಪ್ಪು ಮಾಡಿದೆ ಎಂದು ನಮ್ಮ ನೆರೆ ರಾಷ್ಟ್ರಅಂತರರಾಷ್ಟ್ರೀಯ ಸಮುದಾಯದ ಬಾಗಿಲು ತಟ್ಟಿದೆ.
ಪಾಕಿಸ್ತಾನ ಉಗ್ರವಾದವನ್ನು ನಿಲ್ಲಿಸಿದರೆ ಮಾತ್ರ ನಾವು ಅವರ ಜತೆ ಮಾತನಾಡುತ್ತೇವೆಎಂದು ರಾಜನಾಥ ಸಿಂಗ್ ಹೇಳಿದ್ದಾರೆ.
ಇದನ್ನೂ ಓದಿ:ಕಾಶ್ಮೀರ ಕಣಿವೆಯಲ್ಲಿ ‘ಪತ್ರ’ಗಳಿಗೆ ಮರುಜೀವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.