ನವದೆಹಲಿ: ಗುಜರಾತ್‌ನ ಭುಜ್ ವಾಯುನೆಲೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು (ಶುಕ್ರವಾರ) ಭೇಟಿ ನೀಡಲಿದ್ದಾರೆ.
ಕಳೆದ ವಾರ ನಡೆದ ಸಂಘರ್ಷದ ವೇಳೆ ಪಾಕಿಸ್ತಾನ ಸೇನೆ ಈ ವಾಯುನೆಲೆಯನ್ನು ಗುರಿಯಾಗಿಸಿಕೊಂಡಿತ್ತು.
‘ಆಪರೇಷನ್ ಸಿಂಧೂರ’ ನಂತರ ಶುಕ್ರವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದ ರಾಜನಾಥ್ ಸಿಂಗ್, ಗಡಿ ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ್ದರು.
'ನವದೆಹಲಿಯಿಂದ ಭುಜ್‌ಗೆ ತೆರಳುತ್ತಿದ್ದೇನೆ. ಭುಜ್ ವಾಯು ನೆಲೆಯಲ್ಲಿ ನಮ್ಮ ವಾಯುಪಡೆಯ ಯೋಧರೊಂದಿಗೆ ಸಂವಹನ ನಡೆಸಲು ಎದುರು ನೋಡುತ್ತಿದ್ದೇನೆ' ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.