ADVERTISEMENT

ಜಮ್ಮು– ಕಾಶ್ಮೀರದ ರಜೌರಿಯಲ್ಲಿ ಉಗ್ರರ ಆತ್ಮಾಹುತಿ ದಾಳಿ, ಮೂವರು ಯೋಧರು ಹುತಾತ್ಮ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2022, 6:12 IST
Last Updated 11 ಆಗಸ್ಟ್ 2022, 6:12 IST
   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿಯಿಂದ 25 ಕಿ.ಮೀ ದೂರದಲ್ಲಿ ಇಬ್ಬರು ಭಯೋತ್ಪಾದಕರು ಸೇನಾ ನೆಲೆ ಮೇಲೆಆತ್ಮಾಹುತಿ ದಾಳಿ ನಡೆಸಿದ್ದಾರೆ. ದಾಳಿ ನಡೆಸಿದ ಇಬ್ಬರೂ ಭಯೋತ್ಪಾದಕರನ್ನು ಭದ್ರತಾ ಪಡೆಹೊಡೆರುಳಿಸಿದೆ.

ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿದಿದೆ ಎಂದು ವರದಿ ತಿಳಿಸಿದೆ.

ADVERTISEMENT

ಭಯೋತ್ಪಾದಕರ ದಾಳಿಯಲ್ಲಿ ಗಾಯಗೊಂಡ ಸೇನಾ ಸಿಬ್ಬಂದಿಗಳಲ್ಲಿ ಒಬ್ಬ ಅಧಿಕಾರಿ ಕೂಡ ಸೇರಿದ್ದಾರೆ ಮತ್ತು ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. 16 ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಮಂಜಿಂದರ್ ಸಿಂಗ್ ಅವರು ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ಕಳೆದ ವರ್ಷ ಪಿರ್-ಪಂಜಾಲ್ ಪ್ರದೇಶd ರಾಜೌರಿ ಮತ್ತು ಪೂಂಚ್ ಜಿಲ್ಲೆಗಳಲ್ಲಿ ಉಗ್ರಗಾಮಿಗಳು ಹಲವಾರು ಮಾರಣಾಂತಿಕ ದಾಳಿಗಳನ್ನು ನಡೆಸಿದ್ದರು. ಜಮ್ಮು ಪ್ರದೇಶದಲ್ಲಿ ಇವು ಮುಸ್ಲಿಂ ಬಹುಸಂಖ್ಯಾತ ಜಿಲ್ಲೆಗಳಾಗಿದ್ದು, ಪಾಕಿಸ್ತಾನವು ಈ ಪ್ರದೇಶದಲ್ಲಿ ಮಾರಣಾಂತಿಕ ಉಗ್ರವಾದವನ್ನು ಮತ್ತೆ ಆರಂಭಿಸಲು ಬಯಸುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ರಜೌರಿ-ಪೂಂಚ್ ಅನ್ನು ಕಣಿವೆಯೊಂದಿಗೆ ಸಂಪರ್ಕಿಸುವ ಮೊಘಲ್ ರಸ್ತೆ, ಭದ್ರತಾ ಪಡೆಗಳು ಮತ್ತು ಗುಪ್ತಚರ ಸಂಸ್ಥೆಗಳಿಗೆ ಪ್ರಮುಖ ಕಳವಳವಾಗಿದೆ. ಪಾಕಿಸ್ತಾನದಿಂದ ರಜೌರಿ ಮತ್ತು ಪೂಂಚ್‌ಗೆ ನುಸುಳುವ ಉಗ್ರಗಾಮಿಗಳು ಮೊಘಲ್ ರಸ್ತೆಯ ಮೂಲಕ ಕಣಿವೆಯನ್ನು ತಲುಪುವುದುಸುಲಭವಾಗಿದೆ. ಈ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯ ಟ್ರಕ್‌ಗಳು ಚಲಿಸುವುದರಿಂದ, ಉಗ್ರಗಾಮಿ ನಿರ್ವಾಹಕರಿಗೆ ಶಸ್ತ್ರಾಸ್ತ್ರಗಳನ್ನು ಸಾಗಿಸಲು ಸಹ ಸುಲಭವಾಗುತ್ತದೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.