ADVERTISEMENT

‘ಹಣಕಾಸು ನಷ್ಟ ಹಾಗೂ ದಿವಾಳಿ ಸಂಹಿತೆ‘ ತಿದ್ದುಪಡಿ ಮಸೂದೆ ಅಂಗೀಕಾರ

ದಿನದ ಮಟ್ಟಿಗೆ ರಾಜ್ಯಸಭೆ ಮುಂದೂಡಿಕೆ

ಪಿಟಿಐ
Published 3 ಆಗಸ್ಟ್ 2021, 12:04 IST
Last Updated 3 ಆಗಸ್ಟ್ 2021, 12:04 IST
ರಾಜ್ಯಸಭೆಯಲ್ಲಿ ಮಂಗಳವಾರ ವಿರೋಧ ಪಕ್ಷಗಳ ಸದಸ್ಯರು ಸಭಾಪತಿ ಪೀಠದ ಮುಂದೆ ಪ್ರತಿಭಟಿಸಿದರು –ಪಿಟಿಐ ಚಿತ್ರ
ರಾಜ್ಯಸಭೆಯಲ್ಲಿ ಮಂಗಳವಾರ ವಿರೋಧ ಪಕ್ಷಗಳ ಸದಸ್ಯರು ಸಭಾಪತಿ ಪೀಠದ ಮುಂದೆ ಪ್ರತಿಭಟಿಸಿದರು –ಪಿಟಿಐ ಚಿತ್ರ   

ನವದೆಹಲಿ: ವಿರೋಧ ಪಕ್ಷಗಳ ಪ್ರತಿಭಟನೆಯ ನಡುವೆಯೇ ‘ಹಣಕಾಸು ನಷ್ಟ ಹಾಗೂ ದಿವಾಳಿ ಸಂಹಿತೆ‘ ತಿದ್ದುಪಡಿ ಮಸೂದೆಯನ್ನುಮಂಗಳವಾರ ಅಂಗೀಕರಿಸಿದ ನಂತರ ರಾಜ್ಯಸಭೆಯನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಯಿತು.

ಪೆಗಾಸಸ್‌ ಗೂಢಚರ್ಯೆ ತಂತ್ರಾಂಶದ ದುರ್ಬಳಕೆ, ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರ ಪ್ರತಿಭಟನೆ ಹಾಗೂ ಇತರ ವಿಷಯಗಳ ಕುರಿತು ಚರ್ಚೆಗೆ ವಿರೋಧ ಪಕ್ಷಗಳು ಪಟ್ಟು ಹಿಡಿದವು.

ನಂತರ, ವಿರೋಧ ಪಕ್ಷಗಳು ಪ್ರತಿಭಟನೆಗೆ ಮುಂದಾದವು. ವಿರೋಧ ಪಕ್ಷಗಳ ಗದ್ದಲದ ನಡುವೆಯೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಸೂದೆಯನ್ನು ಮಂಡಿಸಿದರು. ಮಸೂದೆ ಮೇಲೆ ಕೆಲ ಹೊತ್ತಿನ ಚರ್ಚೆ ನಡೆಯಿತಲ್ಲದೇ, ಧ್ವನಿಮತದ ಮೂಲಕ ಅಂಗೀಕರಿಸಲಾಯಿತು.

ADVERTISEMENT

ವಿರೋಧ ಪಕ್ಷಗಳ ಸದಸ್ಯರು ಸಭಾಪತಿ ಪೀಠದ ಮುಂದೆ ಬಂದು ಪ್ರತಿಭಟನೆಯನ್ನು ತೀವ್ರಗೊಳಿಸಿದರು. ಘೋಷಣೆಗಳನ್ನೂ ಕೂಗಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.