ಹೈದರಾಬಾದ್: ತೆಲಂಗಾಣದ ಬಿಜೆಪಿ ನಾಯಕ, ಮಾಜಿ ರಾಜ್ಯಸಭಾ ಸಂಸದ ಆನಂದ್ ಭಾಸ್ಕರ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.
ಆನಂದ್ ಭಾಸ್ಕರ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
‘ಕಳೆದ 4 ವರ್ಷಗಳಿಂದ ಕೇಂದ್ರ ಮಟ್ಟದಲ್ಲಿ ನನ್ನನ್ನು ನಿರ್ಲಕ್ಷಿಸಲಾಗಿದ್ದು, ಅವಮಾನಿಸಲಾಗಿದೆ’ ಎಂದು ಆನಂದ್ ಭಾಸ್ಕರ್ ಆರೋಪಿಸಿದ್ದಾರೆ.
ರಾಪೋಲು ಆನಂದ ಭಾಸ್ಕರ್ ಅವರು ಭಾನುವಾರ ಭಾರತ್ ರಾಷ್ಟ್ರ ಸಮಿತಿ ಅಧ್ಯಕ್ಷ (ಬಿಆರ್‌ಎಸ್), ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರನ್ನು ಭೇಟಿ ಮಾಡಿ ಆಡಳಿತ ಪಕ್ಷಕ್ಕೆ ಸೇರುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.