ADVERTISEMENT

ರಾಜ್ಯಸಭೆ: 11 ರಾಜ್ಯಗಳಿಂದ 41 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಜೂನ್ 2022, 2:53 IST
Last Updated 4 ಜೂನ್ 2022, 2:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ರಾಜ್ಯಸಭೆಯ 57 ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ ನಡೆಯಲಿದೆ. ಇದರಲ್ಲಿ 41 ಅಭ್ಯರ್ಥಿಗಳು(11 ರಾಜ್ಯಗಳಿಂದ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ 11, ತಮಿಳುನಾಡಿನಲ್ಲಿ 6, ಬಿಹಾರದಲ್ಲಿ 5, ಆಂಧ್ರ ಪ್ರದೇಶದಲ್ಲಿ 4, ಮಧ್ಯಪ್ರದೇಶ ಮತ್ತು ಒಡಿಶಾದಲ್ಲಿ ತಲಾ ಮೂವರು, ಛತ್ತೀಸ್‌ಗಢ, ಪಂಜಾಬ್, ತೆಲಂಗಾಣ ಮತ್ತು ಜಾರ್ಖಂಡ್‌ನಲ್ಲಿ ತಲಾ ಇಬ್ಬರು ಮತ್ತು ಉತ್ತರಾಖಂಡದಲ್ಲಿ ಒಬ್ಬ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹರಿಯಾಣ, ರಾಜಸ್ಥಾನ, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಯಾವುದೇ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿಲ್ಲ.

ADVERTISEMENT

ಕಾಂಗ್ರೆಸ್‌ನ ಪಿ. ಚಿದಂಬರಂ ಮತ್ತು ರಾಜೀವ್ ಶುಕ್ಲಾ, ಬಿಜೆಪಿಯ ಸುಮಿತ್ರಾ ವಾಲ್ಮೀಕಿ ಮತ್ತು ಕವಿತಾ ಪಾಟಿದಾರ್, ಮಾಜಿ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್, ಆರ್‌ಜೆಡಿಯ ಮಿಸಾ ಭಾರತಿ ಮತ್ತು ಆರ್‌ಎಲ್‌ಡಿಯ ಜಯಂತ್ ಚೌಧರಿ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾದವರಲ್ಲಿ ಪ್ರಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.