ನವದೆಹಲಿ: 2021ರಿಂದ ತೆರವಾಗಿರುವ ಜಮ್ಮು ಮತ್ತು ಕಾಶ್ಮೀರದ ನಾಲ್ಕು ರಾಜ್ಯಸಭಾ ಸ್ಥಾನಗಳನ್ನು ಭರ್ತಿ ಮಾಡಲು ದ್ವೈವಾರ್ಷಿಕ ಚುನಾವಣೆಗಳು ಅಕ್ಟೋಬರ್ 24ರಂದು ನಡೆಯಲಿವೆ ಎಂದು ಕೇಂದ್ರ ಚುನಾವಣಾ ಆಯೋಗ ಬುಧವಾರ ತಿಳಿಸಿದೆ.
ಪಂಜಾಬ್‌ನ ಎಎಪಿ ಸದಸ್ಯ ಸಂಜೀವ್ ಅರೋರ ಅವರ ರಾಜೀನಾಮೆಯಿಂದ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಕೂಡಾ ಅಕ್ಟೋಬರ್ 24ರಂದು ಉಪ ಚುನಾವಣೆ ನಡೆಯಲಿದೆ.
ಪಂಜಾಬ್ ವಿಧಾನಸಭೆಗೆ ಆಯ್ಕೆಯಾದ ನಂತರ ಅವರು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇಲ್ಲದಿದ್ದರೆ ಅವರ ರಾಜ್ಯಸಭಾ ಸದಸ್ಯತ್ವದ ಅವಧಿ 2028ರ ಏಪ್ರಿಲ್ 9ರಂದು ಕೊನೆಗೊಳ್ಳಬೇಕಿತ್ತು.
ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆದು ಸುಮಾರು ಒಂದು ವರ್ಷದ ನಂತರ ರಾಜ್ಯಸಭೆಯ ಈ ಚುನಾವಣೆ ನಡೆಯಲಿದೆ. ಅಕ್ಟೋಬರ್ 24ರಂದು ಮತದಾನ ಮುಗಿದ ಒಂದು ಗಂಟೆಯ ನಂತರ ಮತ ಎಣಿಕೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.