ADVERTISEMENT

ರಾಜ್ಯಸಭೆ ಚುನಾವಣೆ: ಕರ್ನಾಟಕದಿಂದ ಮಾಕೇನ್‌, ಸೈಯದ್‌, GCCಗೆ ಕಾಂಗ್ರೆಸ್ ಟಿಕೆಟ್‌

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2024, 11:06 IST
Last Updated 14 ಫೆಬ್ರುವರಿ 2024, 11:06 IST
<div class="paragraphs"><p>ಕಾಂಗ್ರೆಸ್‌ </p></div>

ಕಾಂಗ್ರೆಸ್‌

   

ನವದೆಹಲಿ: ರಾಜ್ಯಸಭಾ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.

ಕರ್ನಾಟಕದಿಂದ ರಾಜ್ಯಸಭೆಗೆ ಅಜಯ್‌ ಮಾಕೇನ್‌, ಡಾ. ಸೈಯದ್‌ ನಾಸೀರ್ ಹುಸೇನ್‌, ಜಿ.ಸಿ. ಚಂದ್ರಶೇಖರ್‌ ಅವರಿಗೆ ಟಿಕೆಟ್ ನೀಡಲಾಗಿದೆ.

ADVERTISEMENT

ಮಧ್ಯಪ್ರದೇಶದಿಂದ ಅಶೋಕ್‌ ಸಿಂಗ್ ಸ್ಪರ್ಧಿಸಿದರೆ, ತೆಲಂಗಾಣದಿಂದ ರೇಣುಕಾ ಚೌಧರಿ, ಎಂ.ಅನಿಲ್ ಕುಮಾರ್ ಯಾದವ್ ಕಣಕ್ಕಿಳಿಯಲಿದ್ದಾರೆ.

ಒಟ್ಟು 15 ರಾಜ್ಯಗಳ 56 ಸ್ಥಾನಗಳಿಗೆ ಫೆ.27ರಂದು ದ್ವೈವಾರ್ಷಿಕ ಚುನಾವಣೆ ನಡೆಯಲಿದೆ.

ರಾಜಸ್ಥಾನದಿಂದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಬಿಹಾರದಿಂದ ಡಾ. ಅಖಿಲೇಶ್ ಪ್ರಸಾದ್ ಸಿಂಗ್, ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನು ಸಿಂಘ್ವಿ, ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂದೋರೆ ಅವರಿಗೆ ಈಗಾಗಲೇ ಟಿಕೆಟ್ ಘೋಷಿಸಿದೆ.

ಬುಧವಾರ ಜೈಪುರಕ್ಕೆ ಬಂದಿಳಿದ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.