ADVERTISEMENT

ಅ.7ರಂದು ವಿರೋಧ ಪಕ್ಷಗಳ ನಾಯಕರೊಂದಿಗೆ ಉಪರಾಷ್ಟ್ರಪತಿ ಮೊದಲ ಅಧಿಕೃತ ಸಭೆ

ಪಿಟಿಐ
Published 4 ಅಕ್ಟೋಬರ್ 2025, 4:19 IST
Last Updated 4 ಅಕ್ಟೋಬರ್ 2025, 4:19 IST
<div class="paragraphs"><p>ಸಿ.ಪಿ ರಾಧಾಕೃಷ್ಣನ್</p></div>

ಸಿ.ಪಿ ರಾಧಾಕೃಷ್ಣನ್

   

ನವದೆಹಲಿ: ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರು ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಅಕ್ಟೋಬರ್ 7 ರಂದು ರಾಜ್ಯಸಭೆಯ ವಿವಿಧ ಪಕ್ಷಗಳ ಸಭಾ ನಾಯಕರೊಂದಿಗೆ ಔಪಚಾರಿಕ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೆಪ್ಟೆಂಬರ್ 8 ರಂದು ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ರಾಧಾಕೃಷ್ಣನ್ ಅವರು ಗೆಲುವು ಸಾಧಿಸಿದ್ದರು.

ADVERTISEMENT

ಅಕ್ಟೋಬರ್ 7 ರಂದು ಸಂಜೆ, ವಿರೋಧ ಪಕ್ಷಗಳ ಕೆಲವು ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಮುಂದಿನ ದಿನಗಳಲ್ಲಿ ಇದು ಮುಂದುವರಿಯಲಿದೆ ಎಂದು ಮೂಲಗಳು ಹೇಳಿವೆ.

ಮುಂದಿನ ತಿಂಗಳು ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅದಕ್ಕೂ ಮುನ್ನ ಈ ಸಭೆ ನಿಗದಿಯಾಗಿದೆ.

ವಿರೋಧ ಪಕ್ಷಗಳ ನಾಯಕರೊಂದಿಗೆ ಉತ್ತಮ ಸಂಬಂಧ ಹೊಂದುವ ನಿಟ್ಟಿನಲ್ಲಿ ಸಭಾ ನಾಯಕರೊಂದಿಗೆ ಸಭೆ ನಿಗದಿಯಾಗಿದೆ. ಪರಸ್ಪರ ಪರಿಚಯ ಮಾಡಿಕೊಳ್ಳುವ ಉದ್ದೇಶವೂ ಇದೆ ಎಂದು ಮೂಲಗಳು ಹೇಳಿವೆ.

ರಾಜ್ಯಸಭೆ ಸಭಾಪತಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸೆಪ್ಟೆಂಬರ್ 12ರಂದು ಹಲವು ವಿರೋಧ ಪಕ್ಷಗಳ ನಾಯಕರು ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದರು. ಮುಂಬರುವ ಸಭೆಯು ವಿರೋಧ ಪಕ್ಷಗಳ ನಾಯಕರೊಂದಿಗೆ ನಡೆಸುವ ಮೊದಲ ಔಪಚಾರಿಕ ಸಭೆ ಆಗಿರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.