ADVERTISEMENT

ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ ರಾಜ್ಯ ಸಭಾ ಸಂಸದ ಸಂಜಯ್ ಸಿನ್ಹಾ

​ಪ್ರಜಾವಾಣಿ ವಾರ್ತೆ
Published 30 ಜುಲೈ 2019, 14:37 IST
Last Updated 30 ಜುಲೈ 2019, 14:37 IST
   

ನವದೆಹಲಿ: ಅಮೇಠಿ ರಾಜಮನೆತನದ ಸದಸ್ಯ, ರಾಜ್ಯಸಭಾ ಸಂಸದ ಸಂಜಯ್ ಸಿನ್ಹಾ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ. ಬುಧವಾರ ತಾನು ಬಿಜೆಪಿ ಸೇರಲಿದ್ದೇನೆ ಎಂದು ಸಿನ್ಹಾ ಹೇಳಿದ್ದಾರೆ.

ಮಂಗಳವಾರ ಸುದ್ಧಿಗೋಷ್ಠಿ ನಡೆಸಿದ ಅವರು, ಕಾಂಗ್ರೆಸ್ ಇನ್ನೂ ಭೂತಕಾಲದಲ್ಲೇ ಇದೆ.ಅವರಿಗೆ ಭವಿಷ್ಯದ ಬಗ್ಗೆ ಗೊತ್ತಿಲ್ಲ. ಇವತ್ತು ದೇಶದ ಜನರು ಪ್ರಧಾನಿ ನರೇಂದ್ರ ಮೋದಿಯೊಂದಿಗಿದ್ದಾರೆ.ದೇಶದ ಜನರು ಅವರೊಂದಿಗೆ ಇರುವಾಗ ನಾನೂ ಅವರೊಂದಿಗಿದ್ದೇನೆ.ನಾನು ನಾಳೆ ಬಿಜೆಪಿ ಸೇರಲಿದ್ದೇನೆ.ನಾನು ನನ್ನ ಪಕ್ಷ ಮತ್ತು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ.

ಅಸ್ಸಾಂನಿಂದ ರಾಜ್ಯಸಭಾ ಸಂಸದರಾಗಿರುವ ಸಿನ್ಹಾ ಸಂಸತ್ತಿನ ಮೇಲ್ಮನೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ರಾಜೀನಾಮೆ ಸ್ವೀಕರಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.