ರಾಜ್ಯಸಭೆ
–ಪಿಟಿಐ ಚಿತ್ರ
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಹಿರಿಯ ವಕೀಲ ಉಜ್ವಲ್ ನಿಕಮ್, ಕೇರಳ ಬಿಜೆಪಿ ನಾಯಕ ಸಿ.ಸದಾನಂದನ್ ಮಾಸ್ಟರ್ ಮತ್ತು ಇತಿಹಾಸಗಾರ್ತಿ ಮೀನಾಕ್ಷಿ ಜೈನ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ.
ಸಂವಿಧಾನದ 80(1)(ಎ) ವಿಧಿಯಡಿಯಲ್ಲಿ ನೀಡಲಾದ ವಿಶೇಷ ಅಧಿಕಾರದನ್ವಯ ದ್ರೌಪದಿ ಮುರ್ಮು ಅವರು ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
ರಾಷ್ಟ್ರಪತಿಯವರು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 12 ಮಂದಿಯನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಅಧಿಕಾರ ಹೊಂದಿದ್ದಾರೆ.
ಸಿ.ಸದಾನಂದನ್ ಮಾಸ್ಟರ್, ಉಜ್ವಲ್ ನಿಕಮ್, ಹರ್ಷವರ್ಧನ್ ಶ್ರಿಂಗ್ಲಾ ಮತ್ತು ಮೀನಾಕ್ಷಿ ಜೈನ್
ಮೋದಿ ಅಭಿನಂದನೆ: ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಹರ್ಷವರ್ಧನ್ ಶ್ರಿಂಗ್ಲಾ, ಉಜ್ವಲ್ ನಿಕಮ್, ಸಿ.ಸದಾನಂದನ್ ಮಾಸ್ಟರ್, ಮೀನಾಕ್ಷಿ ಜೈನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.