ನವದೆಹಲಿ: ಸಂಸತ್‌ನ ರಾಜ್ಯಸಭೆಯ ಕಚೇರಿಯಲ್ಲಿ ಕೆಲಸ ಮಾಡುವ ಅಧಿಕಾರಿಯೊಬ್ಬರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಅಧಿಕಾರಿಗೆ ಸೋಂಕು ತಗುಲಿರುವ ಕಾರಣ ರಾಜ್ಯಸಭೆ ಕಚೇರಿಯ ಒಂದು ಭಾಗವನ್ನು ಸೀಲ್‌ಡೌನ್ ಮಾಡಲಾಗಿದೆ. ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿಯಬೇಕಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.