ಲಖನೌ:ಅಯೋಧ್ಯೆಯಲ್ಲಿ ಮುಂದಿನ ಆಗಸ್ಟ್ 3 ಅಥವಾ 5ರಂದು ಉದ್ದೇಶಿತ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ನಿರ್ಧರಿಸಲಾಗಿದೆ.
ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ಶನಿವಾರ ನಡೆಸಿದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಕಾರ್ಯಕ್ರಮದ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ.
‘ಶಂಕುಸ್ಥಾಪನೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ್ದೇವೆ. ಈ ನಿಟ್ಟಿನಲ್ಲಿ ಅಂತಿಮ ತೀರ್ಮಾನವನ್ನು ಪ್ರಧಾನಿ ತೆಗೆದುಕೊಳ್ಳುತ್ತಾರೆ’ ಎಂದುಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದರು.
‘ರಾಮ ದೇವಾಲಯದ ವಿನ್ಯಾಸವನ್ನು ಬದಲಾಯಿಸಲಾಗಿದೆ. ಈ ಮೊದಲು ನಿರ್ಧರಿಸಿದಂತೆ ಮೂರು ಗುಮ್ಮಟಗಳ ಬದಲಾಗಿ ಐದು ಗುಮ್ಮಟಗಳನ್ನು ಹೊಂದಿರಲಿದೆ. ಈ ದೇವಾಲಯ ಮೂರುವರೆ ವರ್ಷದೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.ದೇಶದಲ್ಲಿನ ಪರಿಸ್ಥಿತಿ ನೋಡಿಕೊಂಡು ದೇವಸ್ಥಾನದ ನಿರ್ಮಾಣ ಕಾಮಗಾರಿ ಆರಂಭಿಸಲಾಗುವುದು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.