ಬಂಧನ (ಸಾಂದರ್ಭಿಕ ಚಿತ್ರ)
ಹೈದರಾಬಾದ್: ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಗುಂಪೊಂದು ರಾಮನ ಮೂರ್ತಿಯ ಮೆರವಣಿಗೆ ಹೊರಟಿದ್ದ ವೇಳೆ ಇಬ್ಬರು ಕಿಡಿಗೇಡಿಗಳು ಆ ಮೆರವಣಿಗೆ ಮೇಲೆ ಚಪ್ಪಲಿ ತೂರಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಹಾತನೂರಿನಲ್ಲಿ ನಡೆದಿದೆ.
ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅದರಲ್ಲಿ ಒಬ್ಬ 14 ವರ್ಷದ ಬಾಲಕ.
ಮೆರವಣಿಗೆ ನಡೆಯುವ ವೇಳೆ ಪೊಲೀಸರು ಇದ್ದಿದ್ದರಿಂದ ಗುಂಪು ಘರ್ಷಣೆ ತಪ್ಪಿದೆ ಎಂದು ತಿಳಿದು ಬಂದಿದೆ.
ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮೆರವಣಿಗೆ ಆಯೋಜಿಸಿದ್ದವರು ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ.
ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೆಲ ಮುಸ್ಲಿಂ ಕಿಡಿಗೇಡಿಗಳು ಗಲಭೆ ಎಬ್ಬಿಸುವ ಅವಕಾಶ ಬಳಸಿಕೊಳ್ಳುತ್ತಿದ್ದಾರೆ ಎಂದು ತೆಲಂಗಾಣ ಬಿಜೆಪಿ ವಕ್ತಾರ ಎನ್.ವಿ. ಸುಭಾಸ್ ಈ ಘಟನೆ ಕುರಿತು ಕಿಡಿಕಾರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.