ಭೋಪಾಲ್: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಎಲ್ಲರ ಒಪ್ಪಿಗೆ ಮೇರೆಗೇ ಆಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಕಮಲನಾಥ್ ಹೇಳಿದ್ದಾರೆ.
ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವಿಡಿಯೊದಲ್ಲಿ ಮಾತನಾಡಿರುವ ಅವರು, ‘ದೇಶದ ಲಕ್ಷಾಂತರ ಜನರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂದು ಬಯಸಿದ್ದರು. ಅವರೆಲ್ಲರ ಒಪ್ಪಿಗೆ ಮೇಲೆ ಮಂದಿರ ನಿರ್ಮಾಣವಾಗುತ್ತಿದೆ. ಇದನ್ನು ನಾನು ಸ್ವಾಗತಿಸುತ್ತೇನೆ‘ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂದು ಮಾಜಿಪ್ರಧಾನಿ ರಾಜೀವ್‌ಗಾಂಧಿ ಬಯಸಿದ್ದರು‘ ಎಂದು ಟ್ವೀಟ್ ಮಾಡಿದ್ದಾರೆ.
‘ನಾವು ಭಗವಾನ್ ರಾಮನನ್ನು ನಂಬುತ್ತೇವೆ. ರಾಮನ ಮೇಲಿನ ನಂಬಿಕೆಯಲ್ಲಿಯೇ ದೇಶ ನಡೆಯುತ್ತಿದೆ. ಅದಕ್ಕಾಗಿಯೇ ನಾವೆಲ್ಲ ಅಯೋಧ್ಯೆಯ ರಾಮನ ಜನ್ಮಸ್ಥಳದಲ್ಲಿ ಭವ್ಯವಾದ ದೇವಾಲಯ ನಿರ್ಮಾಣವಾಗಬೇಕೆಂದು ಬಯಸುತ್ತೇವೆ‘ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.