ADVERTISEMENT

ರಾಮಮಂದಿರ ಟ್ರಸ್ಟ್‌ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್‌ ದಾಸರಿಗೆ ಕೋವಿಡ್‌

ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆಯಲ್ಲಿ ಪ್ರಧಾನಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದ ಮಹಾಂತ

ಏಜೆನ್ಸೀಸ್
Published 13 ಆಗಸ್ಟ್ 2020, 7:43 IST
Last Updated 13 ಆಗಸ್ಟ್ 2020, 7:43 IST
‘ಆಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ’ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್‌ ದಾಸ್‌ (ಪಿಟಿಐ ಚಿತ್ರ)
‘ಆಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ’ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್‌ ದಾಸ್‌ (ಪಿಟಿಐ ಚಿತ್ರ)   

ಲಖನೌ: ಆಯೋಧ್ಯೆಯಲ್ಲಿ ಆ. 5ರಂದು ನಡೆದಿದ್ದ ರಾಮಮಂದಿರ ನಿರ್ಮಾಣ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರೊಂದಿಗೆ ವೇದಿಕೆ ಹಂಚಿಕೊಂಡಿದ್ದ ‘ಆಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ’ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್‌ ದಾಸ್‌ ಅವರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ.

ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿ ಬೇನ್‌ ಪಟೇಲ್‌, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರೊಂದಿಗೆ ನೃತ್ಯ ಗೋಪಾಲ್‌ ದಾಸ್‌ ಅವರೂ ವೇದಿಕೆ ಹಂಚಿಕೊಂಡಿದ್ದರು. ‌

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಮಹಾಂತರ ಆರೋಗ್ಯದ ಕುರಿತ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

ADVERTISEMENT

ಮಥುರಾ ಜಿಲ್ಲಾಡಳಿತದೊಂದಿಗೆ ಅವರು ಈಗಾಗಲೇ ಸಮಾಲೋಚನೆಯನ್ನು ನಡೆಸಿದ್ದಾರೆ. ಮೇದಾಂತ ಆಸ್ಪತ್ರೆಯ ವೈದ್ಯರೊಂದಿಗೆ ಮಾತನಾಡಿದ್ದು, ತುರ್ತು ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ. ಈ ಕುರಿತು ಎಎನ್‌ಐ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.