ADVERTISEMENT

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಾತ್ರ ರಾಮಮಂದಿರ ನಿರ್ಮಾಣ: ಹರೀಶ್‌ ರಾವತ್‌

ಏಜೆನ್ಸೀಸ್
Published 18 ಜನವರಿ 2019, 11:32 IST
Last Updated 18 ಜನವರಿ 2019, 11:32 IST
   

ಡೆಹ್ರಾಡೂನ್‌: ‘ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಾತ್ರ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಲಿದೆ’ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹರೀಶ್‌ ರಾವತ್‌ ಹೇಳಿದ್ದಾರೆ.

‘ಬಿಜೆಪಿಯವರಿಗೆ ನೈತಿಕತೆ ಎಂಬುವುದೇ ಇಲ್ಲ.ನೈತಿಕತೆ ಮತ್ತು ಘನತೆ– ಗೌರವವನ್ನು ಪಾಲಿಸದವರು ರಾಮನ ಭಕ್ತರಾಗಿರಲು ಸಾಧ್ಯವಿಲ್ಲ. ನೈತಿಕತೆ ಹಾಗೂ ಸಂವಿಧಾನದ ಮೇಲೆ ನಮಗೆ ನಂಬಿಕೆ ಇದೆ. ಹೀಗಾಗಿ ನಾವು ಅಧಿಕಾರಕ್ಕೆ ಬಂದರೆ ರಾಮ ಮಂದಿರ ನಿರ್ಮಾಣ ಆಗುವುದು ಖಚಿತ’ ಎಂದು ಅವರು ಪತ್ರಕರ್ತರಿಗೆ ತಿಳಿಸಿದರು.

ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದ ರಾವತ್‌, ‘ವಿರೋಧ ಪಕ್ಷಗಳನ್ನು ಅಧಿಕಾರದಿಂದ ಹೇಗಾದರೂ ಮಾಡಿ ಕೆಳಗಿಸುವುದು ಬಿಜೆಪಿ ಉದ್ದೇಶ. ಅದಕ್ಕಾಗಿ, ಹಣ ದುರ್ಬಳಕೆ, ತೋಳ್ಬಲದ ಜತೆಗೆ ಜಾರಿ ನಿರ್ದೇಶನಾಲಯ, ಸಿಬಿಐ, ಆದಾಯ ತೆರಿಗೆ ಇಲಾಖೆಗಳಂತ ಸಂಸ್ಥೆಗಳನ್ನುಬಿಜೆಪಿ ರಾಜಕೀಯ ಅಸ್ತ್ರಗಳನ್ನಾಗಿ ಬಳಸಿಕೊಳ್ಳುತ್ತಿದೆ’ ಎಂದು ಆರೋಪಿಸಿದರು.

ಕರ್ನಾಟಕದಲ್ಲಿ ಬಿಜೆಪಿ ನಡೆಸುತ್ತಿರುವ ಕುತಂತ್ರಕ್ಕೆ ಲೋಕಸಭೆ ಚುನಾವಣೆಯಲ್ಲಿ ತಕ್ಕ ಉತ್ತರ ಸಿಗಲಿದೆ. ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿಕೂಟ ಕರ್ನಾಟಕದಲ್ಲಿ 27 ಲೋಕಸಭೆ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.