ADVERTISEMENT

ರಂಜಾನ್‌: ಉರ್ದು ಶಾಲಾ ಸಮಯ ಬದಲಾವಣೆ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2026, 20:59 IST
Last Updated 2 ಫೆಬ್ರುವರಿ 2026, 20:59 IST
   

ಬೆಂಗಳೂರು: ರಂಜಾನ್‌ ತಿಂಗಳಲ್ಲಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಉರ್ದು ಶಾಲೆಗಳ ಸಮಯ ಬದಲಾವಣೆ ಮಾಡಿ ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದೆ.

ರಂಜಾನ್‌ ತಿಂಗಳ ಉಪವಾಸ ಆರಂಭವಾಗುವ ದಿನದಿಂದ ಮಾರ್ಚ್‌ 31ರವರೆಗೆ ಈ ನಿಯಮ ಅನ್ವಯವಾಗುತ್ತದೆ. ಪ್ರತಿ ದಿನ ಬೆಳಿಗ್ಗೆ 8ಕ್ಕೆ ಆರಂಭವಾಗಿ ಮಧ್ಯಾಹ್ನ 12.45ಕ್ಕೆ ಎಲ್ಲ ತರಗತಿಗಳನ್ನು ಮುಗಿಸಲು ಸೂಚಿಸಲಾಗಿದೆ.  

ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಇತರೆ ಪರೀಕ್ಷೆಗಳನ್ನು ನಿಗದಿತ ವೇಳಾಪಟ್ಟಿಯಂತೆ ನಡೆಸಬೇಕು. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ನಿಯೋಜಿತವಾಗಿರುವ ಉರ್ದು ಮಾಧ್ಯಮ ಶಿಕ್ಷಕರಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ನಿರ್ದೇಶನಾಲಯ ಹೇಳಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.