ADVERTISEMENT

ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವ ಏಕೈಕ ಪಕ್ಷ ಕಾಂಗ್ರೆಸ್: ಜೈರಾಮ್

ಪಿಟಿಐ
Published 17 ಅಕ್ಟೋಬರ್ 2022, 5:43 IST
Last Updated 17 ಅಕ್ಟೋಬರ್ 2022, 5:43 IST
ಜೈರಾಮ್ ರಮೇಶ್
ಜೈರಾಮ್ ರಮೇಶ್   

ನವದೆಹಲಿ: ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವ ಏಕೈಕ ರಾಜಕೀಯ ಪಕ್ಷ ಕಾಂಗ್ರೆಸ್ ಆಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಇಂದು (ಸೋಮವಾರ) ಮತದಾನ ನಡೆಯುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಜೈರಾಮ್, ಚುನಾವಣೆಯನ್ನು ಐತಿಹಾಸಿಕ ಎಂದು ಬಣ್ಣಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಮುಕ್ತ, ನಿಷ್ಪಕ್ಷಪಾತ ಮತ್ತು ಪಾರದರ್ಶಕವಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಜೈರಾಮ್ ರಮೇಶ್ ಅವರು ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮತ ಚಲಾಯಿಸಿದರು.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಸ್ಪರ್ಧಿಸಿದ್ದು, ಯಾರು ಗೆಲ್ಲಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಮತ ಎಣಿಕೆಯು ಬುಧವಾರ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.