ಉಜ್ವಲ್ ನಿಕಮ್
ಎಎನ್‌ಐ ಸ್ಕ್ರೀನ್‌ಗ್ರ್ಯಾಬ್
ನವದೆಹಲಿ: 2008ರ ಮುಂಬೈ ಭಯೋತ್ಪಾದಕ ದಾಳಿ ಸಂಚುಕೋರ ತಹವ್ವುರ್ ಹುಸೇನ್ ರಾಣಾ ಗಡೀಪಾರಿಗೆ ಅಮೆರಿಕ ಸುಪ್ರೀಕೋರ್ಟ್ ಒಪ್ಪಿಗೆ ನೀಡಿದೆ.
‘ಇದು ಭಾರತಕ್ಕೆ ಸಿಕ್ಕ ದೊಡ್ಡ ಜಯವಾಗಿದೆ’ ಎಂದು ಇದೇ ಪ್ರಕರಣದಲ್ಲಿ ಬಂಧಿಯಾಗಿ ಮರಣದಂಡನೆ ಗುರಿಯಾಗಿದ್ದ ಉಗ್ರ ಅಜ್ಮಲ್ ಕಸಬ್ ವಿರುದ್ಧ ವಾದ ಮಂಡಿಸಿದ್ದ ನ್ಯಾಯವಾದಿ ಉಜ್ವಲ್ ನಿಕಮ್ ಪ್ರತಿಕ್ರಿಯಿಸಿದ್ದಾರೆ.
‘ರಾಣಾ ಅವರ ರಿಟ್ ಅರ್ಜಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು ಭಾರತಕ್ಕೆ ಸಿಕ್ಕ ದೊಡ್ಡ ಜಯವಾಗಿದೆ. ಯಾಕೆಂದರೆ ರಾಣಾ ಮತ್ತು ಡೇವಿಡ್ ಹೆಡ್ಲಿ ಮುಂಬೈ ಭಯೋತ್ಪಾದಕ ದಾಳಿಯ ಹಿಂದಿರುವ ಪ್ರಮುಖ ರೂವಾರಿಗಳಾಗಿದ್ದಾರೆ’ ಎಂದು ಸುದ್ದಿಸಂಸ್ಥೆ ಎಎನ್‌ಐಗೆ ಹೇಳಿದರು.
'ರಾಣಾ ಹಸ್ತಾಂತರವು ಮುಂಬೈ ದಾಳಿಯ ಬಗ್ಗೆ ಹೆಚ್ಚಿನ ಪುರಾವೆಗಳನ್ನು ನೀಡುತ್ತದೆ ಎಂದು ನಾನು ನಂಬುತ್ತೇನೆ’ ಎಂದು ಹೇಳಿದರು.
ಇದೊಂದು ನ್ಯಾಯಾಂಗ ಪ್ರಕ್ರಿಯಾಗಿದ್ದು ಇಂತಹ ನ್ಯಾಯಾಂಗ ಪ್ರಕ್ರಿಯೆಗಳು ನಡೆಯುತ್ತಲೇ ಇರುತ್ತವೆ. ಈಗ ನೀರವ್ ಮೋದಿ, ದಾವೂದ್ ಸೇರಿದಂತೆ ಮುಂತಾದವರನ್ನು ನ್ಯಾಯಾಂಗ ಪ್ರಕ್ರಿಯೆಗೆ ಒಳಪಡಿಸಬೇಕಿದೆ.ಸಂಜಯ್ ರಾವುತ್, ಶಿವಸೇನಾ(ಯುಬಿಟಿ) ಸಂಸದ
ತಹವ್ವುರ್ ಹುಸೇನ್ ರಾಣಾ 26/11 ಮುಂಬೈ ದಾಳಿಯ ಪ್ರಮುಖ ಆರೋಪಿ. ಆರೋಪಿಯನ್ನು ಗಡೀಪಾರು ಮಾಡಲು ಒಪ್ಪಿರುವುದು ಭಾರತ ಸರ್ಕಾರಕ್ಕೆ ಸಿಕ್ಕ ದೊಡ್ಡ ಗೆಲುವು. ಅವರು ವಾಪಸ್ ಬಂದ ಮೇಲೆ ಪ್ರಕರಣದ ತನಿಖೆಗೆ ಹೆಚ್ಚಿನ ಮಾಹಿತಿ ಸಿಗಲಿದೆ.ನರೇಶ್ ಮ್ಹಾಸ್ಕೆ, ಶಿವಸೇನಾ(ಶಿಂದೆ ಬಣ) ಸಂಸದ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.