‘ಕಾಳು ಮೆಣಸಿನ ರಾಣಿ’ ಚೆನ್ನಭೈರಾದೇವಿ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ
ಚಿತ್ರ ಕೃಪೆ: rashtrapatibhvn
ನವದೆಹಲಿ: ‘ಭಾರತದ ಕಾಳು ಮೆಣಸಿನ ರಾಣಿ’ ಎಂದೇ ಪ್ರಸಿದ್ಧಿ ಪಡೆದ ರಾಣಿ ಚೆನ್ನಭೈರಾದೇವಿ ಸ್ಮರಣಾರ್ಥ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಮುರ್ಮು ಅವರು ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪಲ್ಹಾದ ಜೋಶಿ, ‘ಮೆಣಸಿನ ರಾಣಿ’ ಎಂದೇ ಪ್ರಸಿದ್ದವಾಗಿರುವ ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಚೆ ಚೀಟಿ ಬಿಡುಗಡೆ ಮಾಡಿದ ವಿಶೇಷ ಸಂದರ್ಭದಲ್ಲಿ ಭಾಗವಹಿಸಿದ ಕ್ಷಣಗಳು’ ಎಂದು ಫೋಟೊ ಹಂಚಿಕೊಂಡಿದ್ದಾರೆ.
‘ಕರ್ನಾಟಕದ ಗೇರುಸೊಪ್ಪೆಯ ರಾಣಿಯಾಗಿ, ‘ರೈನಾ ಡಾ ಪಿಮೆಂಟಾ’ ಎಂದು ಪೋರ್ಚುಗೀಸರು ಕರೆಯುತ್ತಿದ್ದ ರಾಣಿ ಚೆನ್ನಭೈರಾದೇವಿ ಕರ್ನಾಟಕದ ಶಕ್ತಿಯ ಸಂಕೇತವಾಗಿದ್ದಾರೆ. ಅವರು 54 ವರ್ಷಗಳ ಕಾಲ ತಮ್ಮ ರಾಜ್ಯವನ್ನು ರಕ್ಷಿಸಿಕೊಂಡರು. ಅವರ ಪರಂಪರೆ ಇಂದಿಗೂ ಸ್ಫೂರ್ತಿ ನೀಡುತ್ತದೆ’ ಎಂದು ಬರೆದುಕೊಂಡಿದ್ದಾರೆ.
ಅಂಚೆ ಚೀಟಿ ಬಿಡುಗಡೆಯ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.