ADVERTISEMENT

ರಂಜನ್ ಗೊಗೊಯಿಗೆ ‘ಸುಪ್ರೀಂ’ ಸಾರಥ್ಯ

ಪಿಟಿಐ
Published 2 ಅಕ್ಟೋಬರ್ 2018, 20:01 IST
Last Updated 2 ಅಕ್ಟೋಬರ್ 2018, 20:01 IST
ರಂಜನ್ ಗೊಗೊಯಿ
ರಂಜನ್ ಗೊಗೊಯಿ   

ನವದೆಹಲಿ: ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ಅವರು 46ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಇಂದು ಅಧಿಕಾರ ಸ್ವೀಕರಿಸಲಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಗೊಗೊಯಿ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಅಕ್ಟೋಬರ್ 2ರಂದು ನಿವೃತ್ತರಾಗಿದ್ದು, 64 ವರ್ಷದ ಗೊಗೊಯಿ ಅಧಿಕಾರ ಅವಧಿ 2019ರ ನವೆಂಬರ್‌ 18ಕ್ಕೆ ಕೊನೆಗೊಳ್ಳಲಿದೆ.

ADVERTISEMENT

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಯನ್ನು ಅಲಂಕರಿಸುತ್ತಿರುವ ಈಶಾನ್ಯ ರಾಜ್ಯಗಳ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಅಸ್ಸಾಂನ ಗೊಗೊಯಿ ಪಾತ್ರರಾಗಿದ್ದಾರೆ.

ಅಧಿಕಾರ ಸ್ವೀಕರಿಸಿದ ನಂತರ ಅವರು ಮಧ್ಯಾಹ್ನ 12 ಗಂಟೆಗೆ ನ್ಯಾಯಮೂರ್ತಿಗಳಾದ ಎಸ್‌.ಕೆ. ಕೌಲ್‌ ಮತ್ತು ಕೆ.ಎಂ. ಜೋಸೆಫ್‌ ಜೊತೆಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.