ನವದೆಹಲಿ: 60 ವರ್ಷ ಮೀರಿದ ಮತ್ತು 30 ವರ್ಷ ವಕೀಲರಾಗಿ ಕಾರ್ಯನಿರ್ವಹಿಸಿದವರಿಗೆ ಹಿರಿಯ ವಕೀಲ ಎಂಬ ಹುದ್ದೆ ಸೃಷ್ಟಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ
ನಿರಾಕರಿಸಿದ್ದಾರೆ.
ನ್ಯಾಯಾಂಗ ಪಾರದರ್ಶಕತೆ ಮತ್ತು ಸುಧಾರಣೆ ಕುರಿತು ಆಂದೋಲನ ನಡೆಸುತ್ತಿರುವ ‘ನ್ಯಾಷನಲ್ ಲಾಯರ್ಸ್’ ಸಂಸ್ಥೆ ಈ ಅರ್ಜಿಯನ್ನು ಸಲ್ಲಿಸಿದ್ದು, ಅರ್ಜಿದಾರರ ಪರ ವಕೀಲ ಮ್ಯಾಥ್ಯೂಸ್ ಜೆ. ನೆಡೆಂಪಾರ ನ್ಯಾಯಾಲಯಕ್ಕೆ ಹಾಜರಾಗಿ, ಸಿಜೆಐ ಗೊಗೊಯ್ ಮತ್ತು ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಪೀಠ, ಅರ್ಜಿಯ ವಿಚಾರಣೆ ನಡೆಸಬೇಕು ಎಂದು ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.