ಅತ್ಯಾಚಾರ
ಸಾಂದರ್ಭಿಕ ಚಿತ್ರ
ರಾಂಚಿ: ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ವ್ಯಕ್ತಿಯೊಬ್ಬನಿಗೆ ಚಪ್ಪಲಿ ಹಾರ ಹಾಕಿ, ಮೆರವಣಿಗೆ ಮಾಡಿ ಥಳಿಸಿ ಕೊಂದ ಘಟನೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಸೋನುವಾ ಪೊಲೀಸ್ ಠಾಣೆ ವ್ಯಾಪ್ತಿಯ ದೇವಂಬೀರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಆರೋಪಿಯನ್ನು 56 ವರ್ಷದ ಇದೇ ಗ್ರಾಮದ ನಿವಾಸಿ ಸೈಮನ್ ಟರ್ಕಿ ಎಂದು ಗುರುತಿಸಲಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸೋನುವಾ ಪೊಲೀಸ್ ಠಾಣಾಧಿಕಾರಿ ಶಶಿಬಾಲಾ ಭೆಂಗ್ರಾ ತಿಳಿಸಿದ್ದಾರೆ.
ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದು, ಇದು ಆಕೆಯ ಕುಟುಂಬಸ್ಥರ ಕೆಂಗಣ್ಣಿಗೆ ಕಾರಣವಾಯಿತು. ಇದರಿಂದಾಗಿ ಆರೋಪಿಯನ್ನು ಕುಟುಂಬಸ್ಥರು ಥಳಿಸಿ ಕೊಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿಯನ್ನು ಹೊಡೆದು ಕೊಂದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದೇವೆ. ಮೃತರ ಕುಟುಂಬದವರು ಕೊಲೆ ಪ್ರಕರಣ ದಾಖಲಿಸಿದ್ದು, ಸಂತ್ರಸ್ತೆಯ ಕುಟುಂಬದವರೂ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.