ADVERTISEMENT

ಯುವತಿ ಮೇಲೆ ಅತ್ಯಾಚಾರ, ಹತ್ಯೆ: ಆರೋಪಿ ಕಾನ್‌ಸ್ಟೆಬಲ್‌ ಬಂಧನ

ಪಿಟಿಐ
Published 2 ಜನವರಿ 2024, 11:57 IST
Last Updated 2 ಜನವರಿ 2024, 11:57 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ಆಗ್ರಾ: ಪೋಲಿಸ್‌ ಕಾನ್‌ಸ್ಟೆಬಲ್‌ವೊಬ್ಬ 25 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿ, ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಆರೋಪಿಯನ್ನು ಝಾನ್ಸಿ ಮೂಲದ ರಾಘವೇಂದ್ರ ಸಿಂಗ್ (27) ಎಂದು ಗುರುತಿಸಲಾಗಿದೆ.

ADVERTISEMENT

‘ಆಗ್ರಾದ ಬಾಡಿಗೆ ಮನೆಯಲ್ಲಿ ರಾಘವೇಂದ್ರ ವಾಸವಾಗಿದ್ದನು. ಆರೋಪಿ ಮನೆಯ ಕೊಠಡಿಯಲ್ಲಿ ಯುವತಿಯ ಶವ ನೇಣು ಬೀಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಂತ್ರಸ್ತೆಯ ಕುಟುಂಬದವರು ನೀಡಿದ ದೂರಿನ ಆಧಾರ ಮೇಲೆ, ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಛಾತಾದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಆರ್‌.ಕೆ ಸಿಂಗ್ ಮಾಹಿತಿ ನೀಡಿದ್ದಾರೆ.

‘ಇಬ್ಬರು ಮೊದಲಿನಿಂದಲೂ ಪರಿಚಿತರಾಗಿದ್ದರು. ಘಟನೆ ನಡೆಯುವ ಒಂದು ದಿನದ ಹಿಂದೆ ಸಂತ್ರಸ್ತೆ ರಾಘವೇಂದ್ರ ವಾಸವಿದ್ದ ಮನೆಗೆ ಭೇಟಿ ನೀಡಿದ್ದರು. ಯುವತಿ ಗುರುಗ್ರಾಮ್‌ನ ಆರೋಗ್ಯ ಕೇಂದ್ರವೊಂದರಲ್ಲಿ ಕೆಲಸ ಮಾಡುತ್ತಿದ್ದರು’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡಿಸೆಂಬರ್‌ 27ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸಂತ್ರಸ್ತೆಯ ಸಹೋದರನ ಪ್ರಕಾರ, ಝಾನ್ಸಿಯಲ್ಲಿ ನರ್ಸಿಂಗ್ ತರಬೇತಿ ಪಡೆದಿದ್ದ ವೇಳೆ ಇವರಿಬ್ಬರ ಪರಿಚಯವಾಗಿತ್ತು. ರಾಘವೇಂದ್ರ ಮನೆಯಲ್ಲಿ ಮದುವೆ ಪ್ರಸ್ತಾಪ ಮಾಡಿದ್ದರು. ಆದರೆ ಮನೆಯಲ್ಲಿ ಒಪ್ಪಲಿಲ್ಲ. ಇದಾದ ಬಳಿಕವೂ ಅವರಿಬ್ಬರು ಸಂಪರ್ಕದಲ್ಲಿದ್ದರು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.