ADVERTISEMENT

ಅಪಘಾತ: ಅತ್ಯಾಚಾರ ಸಂತ್ರಸ್ತೆ ಸ್ಥಿತಿ ಗಂಭೀರ

​ಪ್ರಜಾವಾಣಿ ವಾರ್ತೆ
Published 28 ಜುಲೈ 2019, 19:52 IST
Last Updated 28 ಜುಲೈ 2019, 19:52 IST

ಲಖನೌ:ಉನ್ನಾವ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಅವರ ಕುಟುಂಬದವರು ಪ್ರಯಾಣಿಸುತ್ತಿದ್ದ ಕಾರು ಉತ್ತರ ಪ್ರದೇಶದ ರಾಯಬರೇಲಿಯಲ್ಲಿ ಅಪಘಾತಕ್ಕೆ ಈಡಾಗಿದೆ. ಕಾರು ಮತ್ತು ಲಾರಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸಂತ್ರಸ್ತೆಯ ತಾಯಿ ಮತ್ತು ಚಿಕ್ಕಮ್ಮ ಮೃತಪಟ್ಟಿದ್ದಾರೆ.

ಸಂತ್ರಸ್ತೆ, ಆಕೆಯ ಸೋದರಿ ಮತ್ತು ವಕೀಲ ಗಾಯಗೊಂಡಿದ್ದಾರೆ. ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದೆ.

ಅಪಘಾತದ ಹಿಂದೆ ಅತ್ಯಾಚಾರದ ಆರೋಪಿ ಬಿಜೆಪಿ ಶಾಸಕ ಕುಲದೀಪ್‌ ಸೆಂಗರ್‌ನ ಕೈವಾಡವಿದೆ ಎಂದು ಸಂತ್ರಸ್ತೆಯ ಚಿಕ್ಕಪ್ಪ ಆರೋಪಿಸಿದ್ದಾರೆ. ಆದರೆ ಇದನ್ನು ಪೊಲೀಸರು ಅಲ್ಲಗಳೆದಿದ್ದಾರೆ.

ADVERTISEMENT

ಅತ್ಯಾಚಾರದ ದೂರು ನೀಡಲು ಠಾಣೆಗೆ ಹೋಗಿದ್ದ ಸಂತ್ರಸ್ತೆಯ ತಂದೆಯನ್ನು ಬೇರೆ ಪ್ರಕರಣವೊಂದರಲ್ಲಿ ಬಂಧಿಸಲಾಗಿತ್ತು. ಸೆಂಗರ್‌ನ ಸೋದರ ನಡೆಸಿದ ಹಲ್ಲೆಯಿಂದ ಸಂತ್ರಸ್ತೆಯ ತಂದೆ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.