ADVERTISEMENT

ಸಾಮೂಹಿಕ ಅತ್ಯಾಚಾರ ಪ್ರಕರಣ: ಸಾಕ್ಷ್ಯಾಧಾರ ಕೊರತೆ, ಆರೋಪಿಗಳು ಖುಲಾಸೆ

ಪಿಟಿಐ
Published 27 ನವೆಂಬರ್ 2018, 19:54 IST
Last Updated 27 ನವೆಂಬರ್ 2018, 19:54 IST

ಮುಜಫ್ಫರ್‌ನಗರ: 3‌2 ವರ್ಷದ ವಿವಾಹಿತ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಆರು ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಇಲ್ಲಿನ ತ್ವರಿತ ವಿಲೇವಾರಿ ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಆರೋಪ ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್‌ ವಿಫಲವಾಗಿದೆ ಎಂದು ಹೇಳಿದೆ.

‘2013ರಲ್ಲಿ ತನ್ನನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ವ್ಯಕ್ತಿಗಳು, ಕೃತ್ಯವನ್ನು ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ್ದರು. ಪೊಲೀಸರಿಗೆ ದೂರು ನೀಡದಂತೆ ಮೂರು ವರ್ಷಗಳ ಕಾಲ ಬೆದರಿಕೆ ಹಾಕಿದ್ದರು’ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದರು.

2016ರ ಜನವರಿಯಲ್ಲಿ ಅತ್ಯಾಚಾರದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಈ ಘಟನೆಯು ಗ್ರಾಮದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆಗೆ ಕಾರಣವಾಗಿತ್ತು.‌

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.