ADVERTISEMENT

ಮಾದಕ ವಸ್ತು ನೀಡಿ ಯುವತಿ ಮೇಲೆ ಅತ್ಯಾಚಾರ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2019, 19:26 IST
Last Updated 15 ಮಾರ್ಚ್ 2019, 19:26 IST

ಬಾಂಡಾ (ಉತ್ತರಪ್ರದೇಶ): 17 ವರ್ಷದ ಯುವತಿಗೆ ಮಾದಕ ವಸ್ತು ನೀಡಿ ಅತ್ಯಾಚಾರ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮನೆಯವರೊಂದಿಗೆ ಜಗಳವಾಡಿಕೊಂಡು ಮನೆಬಿಟ್ಟು ಬಂದ ಯುವತಿಗೆ ಬಸ್‌ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಪರಿಚಯವಾಗಿ, ತನ್ನ ಮನೆಗೆ ಕರೆದುಕೊಂಡು ಹೋಗಿದ್ದಾನೆ. ನಂತರ ಆಕೆಗೆ ಮಾದಕ ವಸ್ತು ನೀಡಿ ಮತ್ತೊಬ್ಬನೊಂದಿಗೆ ಸೇರಿ ಅತ್ಯಾಚಾರ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT