ADVERTISEMENT

ತರುಣ್ ತೇಜ್‌ಪಾಲ್ ವಿರುದ್ಧದ ಅತ್ಯಾಚಾರ ಪ್ರಕರಣ ಗಂಭೀರವಾದುದು: ಸುಪ್ರೀಂಕೋರ್ಟ್

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2019, 9:40 IST
Last Updated 19 ಆಗಸ್ಟ್ 2019, 9:40 IST
   

ನವದೆಹಲಿ: ಕಿರಿಯ ಸಹೋದ್ಯೋಗಿಯ ಮೇಲೆ ಅತ್ಯಾಚಾರವೆಸಗಿರುವ ಆರೋಪ ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ಮೇಲಿದೆ. ಸೋಮವಾರ ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪ್ರಸ್ತುತ ಪ್ರಕರಣವನ್ನು ರದ್ದು ಮಾಡಲಾಗುವುದಿಲ್ಲ. ಇದು ಗಂಭೀರ ವಿಷಯ ಮತ್ತು ಸಂತ್ರಸ್ತೆಯ ಖಾಸಗಿತನದಮೇಲಿನ ದೌರ್ಜನ್ಯ ಎಂದಿದೆ.

ಗೋವಾದ ನ್ಯಾಯಾಲಯದಲ್ಲಿ ತನ್ನ ವಿರುದ್ದ ದಾಖಲಾಗಿರುವ ಅತ್ಯಾಚಾರ ಪ್ರಕರಣ ರದ್ದು ಮಾಡಬೇಕೆಂದು ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

ಈ ಮನವಿ ತಿರಸ್ಕರಿಸಿದ ಸುಪ್ರೀಂಕೋರ್ಟ್ 6 ತಿಂಗಳೊಳಗೆ ಈ ವಿಚಾರಣೆ ಪೂರ್ಣಗೊಳಿಸಿ ಎಂದು ಗೋವಾ ನ್ಯಾಯಾಲಯಕ್ಕೆ ಆದೇಶಿಸಿದೆ.

ADVERTISEMENT

ಏನಿದು ಪ್ರಕರಣ?
ತೆಹಲ್ಕಾದ ಸಂಸ್ಥಾಪಕ -ಸಂಪಾದಕ ತರುಣ್ ತೇಜ್‌ಪಾಲ್ 2013ರಲ್ಲಿ ಥಿಂಕ್ ಫೆಸ್ಟ್ ಕಾರ್ಯಕ್ರಮದ ವೇಳೆ ಲೈಂಗಿಕ ದೌರ್ಜನ್ಯವೆಸಗಿದ್ದರು ಎಂದು ಅದೇ ಸಂಸ್ಥೆಯ ಕಿರಿಯ ಸಹೋದ್ಯೋಗಿಯೊಬ್ಬರು ಆರೋಪಿಸಿದ್ದರು.ಪಂಚತಾರಾ ಹೋಟೆಲ್‌ನ ಲಿಫ್ಟ್‌ನಲ್ಲಿ 52ರ ಹರೆಯದ ತರುಣ್ ಲೈಂಗಿಕ ದೌರ್ಜನ್ಯವೆಸಗಿದ್ದರು ಎಂದು ಸಂತ್ರಸ್ತೆ ದೂರು ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.