ADVERTISEMENT

ದಲಿತ ಬಾಲಕಿ ಮೇಲೆ ಅತ್ಯಾಚಾರ

ಪಿಟಿಐ
Published 18 ಮಾರ್ಚ್ 2019, 18:17 IST
Last Updated 18 ಮಾರ್ಚ್ 2019, 18:17 IST

ಮುಜಫ್ಫರ್‌ನಗರ: ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯ ಪುಲಾತ್‌ ಗ್ರಾಮದಲ್ಲಿ 17 ವರ್ಷದ ದಲಿತ ಬಾಲಕಿ ಮೇಲೆ ಐವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾನುವಾರುಗಳಿಗೆ ಮೇವು ಸಂಗ್ರಹಿಸಲು ಬಾಲಕಿ ಹೋಗಿದ್ದಾಗ, ಆರೋಪಿಗಳು ಅತ್ಯಚಾರವೆಸಗಿದ್ದಾರೆ ಎಂದು ಬಾಲಕಿ ಸಹೋದರ ದೂರು ನೀಡಿದ್ದಾರೆ. ಈ ದೃಶ್ಯವನ್ನು ವಿಡಿಯೊ ಚಿತ್ರೀಕರಣ ಮಾಡಿರುವ ಆರೋಪಿಗಳು, ಪೊಲೀಸರಿಗೆ ದೂರು ನೀಡಿದರೆ ಸಾರ್ವಜನಿಕವಾಗಿ ವಿಡಿಯೊ ಬಹಿರಂಗಪಡಿಸಲಾಗುವುದು ಎಂದು ಬಾಲಕಿಗೆ ಬೆದರಿಕೆ ಹಾಕಿದ್ದಾರೆ.

ಪ್ರಕರಣ ಸಂಬಂಧ ಮೂವರನ್ನು ಬಂಧಿಸಿದ್ದು, ಇಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.