ADVERTISEMENT

ಉ.ಪ್ರದೇಶ|ಚಲಿಸುತ್ತಿದ್ದ ಕಾರಿನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರ ಬಂಧನ

ಪಿಟಿಐ
Published 11 ಮೇ 2025, 11:42 IST
Last Updated 11 ಮೇ 2025, 11:42 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

ಲಖನೌ: ಚಲಿಸುತ್ತಿದ್ದ ಕಾರಿನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಆಕೆಯ ಸ್ನೇಹಿತೆಯನ್ನು ಕಾರಿನಿಂದ ತಳ್ಳಿ ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಈ ಘಟನೆ ಸಂಬಂಧ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದು, ‘ಮಂಗಳವಾರ ಸಂಜೆ ನಾನು ಮತ್ತು ನನ್ನ ಸ್ನೇಹಿತೆ ಆಕೆಯ ಸ್ನೇಹಿತರಾದ ಸಂದೀಪ್, ಅಮಿತ್ ಮತ್ತು ಗೌರವ್ ಜತೆಗೆ ಕಾರಿನಲ್ಲಿ ನೋಯ್ಡಾದಿಂದ ಲಖನೌಗೆ ತೆರಳುತ್ತಿದ್ದೇವು. ಈ ವೇಳೆ ಆರೋಪಿಗಳು ಮದ್ಯ ಖರೀದಿಸಿ ಕಾರಿನಲ್ಲಿ ಕುಡಿದು ಗಲಾಟೆ ಆರಂಭಿಸಿದರು. ಬಳಿಕ ನನ್ನ ಸ್ನೇಹಿತೆಯನ್ನು ಕಾರಿನಿಂದ ತಳ್ಳಿ, ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ಬುಲಂದ್‌ಶಹರ್‌ನಲ್ಲಿ ಸಂತ್ರಸ್ತೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದಳು. ಈ ಘಟನೆ ಸಂಬಂಧ ಖುರ್ಜಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ( ಬುಲಂದ್‌ಶಹರ್‌ ಗ್ರಾಮೀಣ) ಡಾ.ತೇಜ್‌ವೀರ್ ಸಿಂಗ್ ಹೇಳಿದ್ದಾರೆ.

ಈ ಸಂಬಂಧ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಯಿತು, ಈ ಘಟನೆಯಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಎನ್‌ಕೌಂಟರ್‌ ಮೂಲಕ ಬಂಧಿಸಲಾಗಿದೆ. ಆರೋಪಿಗಳಿಂದ ಅಕ್ರಮ ಬಂದೂಕುಗಳು, ಅಪರಾಧಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಂಡಿದ್ದೇವೆ ಎಂದು ಸಿಂಗ್ ತಿಳಿಸಿದ್ದಾರೆ.

ತನಿಖೆಯನ್ನು ಪೂರ್ಣಗೊಳಿಸಿದ್ದೇವೆ. ನ್ಯಾಯಾಲಯವು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಈ ನಿಟ್ಟಿನಲ್ಲಿ ನಾವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ದಿನೇಶ್ ಕುಮಾರ್ ಸಿಂಗ್ ಭಾನುವಾರ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.