ADVERTISEMENT

ಪುಣೆ | ಅತ್ಯಾಚಾರ ಪ್ರಕರಣ: ಆರೋಪಿ ಸುಳಿವು ನೀಡಿದವರಿಗೆ ₹1 ಲಕ್ಷ ಬಹುಮಾನ

ಪಿಟಿಐ
Published 27 ಫೆಬ್ರುವರಿ 2025, 6:34 IST
Last Updated 27 ಫೆಬ್ರುವರಿ 2025, 6:34 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮುಂಬೈ: ಡಿಪೋದಲ್ಲಿ ನಿಂತಿದ್ದ ಬಸ್‌ ಒಳಗೆ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ ₹1 ಲಕ್ಷ ಬಹುಮಾನ ನೀಡುವುದಾಗಿ ಪುಣೆ ಪೊಲೀಸರು ಘೋಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯನ್ನು ಪತ್ತೆ ಹಚ್ಚಲು 13 ಪೊಲೀಸ್‌ ತಂಡಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ADVERTISEMENT

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪುಣೆ ಪೊಲೀಸ್‌ ಆಯುಕ್ತ ಅಮಿತೇಶ್‌ ಕುಮಾರ್‌, ‘ಆರೋಪಿಯ ಬಗ್ಗೆ ಮಾಹಿತಿ ನೀಡುವವರಿಗೆ ₹1 ಲಕ್ಷ ಬಹುಮಾನ ನೀಡಲಾಗುವುದು. ಆರೋಪಿಯ ಸುಳಿವು ಸಿಕ್ಕಲ್ಲಿ 020-24442769 ಅಥವಾ 9881670659 ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ನೀಡಬಹುದು. ಮಾಹಿತಿದಾರರ ಹೆಸರನ್ನು ಗೌಪ್ಯವಾಗಿ ಇಡಲಾಗುವುದ’ ಎಂದು ತಿಳಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ ಪುಣೆ ನಗರದ ಸ್ವಾರ್ಗೇಟ್‌ ಬಸ್‌ ನಿಲ್ದಾಣದ ನಿರ್ಜನ ಪ್ರದೇಶದಲ್ಲಿ ನಿಂತಿದ್ದ ಬಸ್‌ ಒಳಗಡೆ 26 ವರ್ಷದ ಮಹಿಳೆಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಕೃತ್ಯದ ಬಳಿಕ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯ ಮೇಲೆ ನಡೆದ ಅತ್ಯಾಚಾರ ಕೃತ್ಯವನ್ನು ಖಂಡಿಸಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌, ಘಟನೆ ಕುರಿತು ತನಿಖೆ ನಡೆಸಿ ಆರೋಪಿಯನ್ನು ಶೀಘ್ರ ಬಂಧಿಸುವಂತೆ ನಿರ್ದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.