ADVERTISEMENT

ಕ್ವಾರಂಟೈನ್‌ ಕೇಂದ್ರದಲ್ಲಿ ಬಾಲಕಿ ಮೇಲೆ ಅತ್ಯಾಚಾರ

ಏಜೆನ್ಸೀಸ್
Published 13 ಮೇ 2020, 20:00 IST
Last Updated 13 ಮೇ 2020, 20:00 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಲಖನೌ: ಉತ್ತರ ಪ್ರದೇಶದ ಗೋರಖ್‌ಪುರದ ಕ್ವಾರಂಟೈನ್‌ ಕೇಂದ್ರದಲ್ಲಿ ಯುವಕನೊಬ್ಬ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

‘ಕಳೆದೆರಡು ದಿನಗಳ ಹಿಂದೆ ದೆಹಲಿಯಿಂದ ಮರಳಿದ್ದ ವಲಸೆ ಕಾರ್ಮಿಕನನ್ನು ಬೇಲ್ಘಟ್‌ ಪ್ರಾರ್ಥಮಿಕ ಶಾಲೆಯಲ್ಲಿ ಕ್ವಾರಂಟೈನ್‌ ಮಾಡಲಾಗಿತ್ತು. ಬಾಲಕಿ ಶಾಲೆ ಬಳಿ ಆಡು ಮೇಯಿಸುತ್ತಿದ್ದಳು. ಈ ವೇಳೆ ಚಾಕಲೇಟ್‌ ನೀಡುವ ನೆಪದಲ್ಲಿ ಕರೆಸಿಕೊಂಡ ಆರೋಪಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ’ ಎಂದು ಪೊಲೀಸರು ತಿಳಿಸಿದರು.

‘ಬಾಲಕಿಯ ಆಕ್ರದನ ಕೇಳಿ ತಕ್ಷಣವೇ ಆಗಮಿಸಿದ ಸ್ಥಳೀಯರು ಬಾಲಕಿಯನ್ನು ರಕ್ಷಿಸಿದರು. ಸದ್ಯ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ’ ಎಂದು ಪೊಲೀಸರು ಮಾಹಿತಿನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.