ADVERTISEMENT

ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ ಶಿಕ್ಷಕನಿಗೆ 'ಬೆತ್ತಲೆ ಮೆರವಣಿಗೆ' ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2018, 8:52 IST
Last Updated 22 ಆಗಸ್ಟ್ 2018, 8:52 IST
ವಿಡಿಯೊ ದೃಶ್ಯಾವಳಿ
ವಿಡಿಯೊ ದೃಶ್ಯಾವಳಿ   

ಹೈದರಾಬಾದ್: ವಿದ್ಯಾರ್ಥಿನಿಯೊಬ್ಬಳನ್ನು ಅತ್ಯಾಚಾರ ಮಾಡಿದ್ದ ಆರೋಪದಲ್ಲಿ ಶಾಲಾ ಶಿಕ್ಷಕನಿಗೆ ಥಳಿಸಿ ರಸ್ತೆಯಲ್ಲಿ ಬೆತ್ತಲೆ ಮೆರವಣಿಗೆ ಮಾಡಿದ ಪ್ರಕರಣವನ್ನು ಎನ್‍ಡಿಟಿವಿ ವರದಿ ಮಾಡಿದೆ.


ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಏಲೂರ್ ನಗರದಲ್ಲಿ ಶಿಕ್ಷಕನನ್ನು ಬೆತ್ತಲೆ ಮೆರವಣಿಗೆ ಮಾಡುತ್ತಿರುವ ದೃಶ್ಯವನ್ನು ದಾರಿಹೋಕರೊಬ್ಬರು ವಿಡಿಯೊ ಮಾಡಿದ್ದಾರೆ. ವಿಡಿಯೊ ದೃಶ್ಯಗಳಲ್ಲಿ ಕಾಣಿಸುವಂತೆ ಟ್ರಾಫಿಕ್ ಇರುವ ರಸ್ತೆಯಲ್ಲಿ 40ರ ಹರೆಯದ ವ್ಯಕ್ತಿಯೊಬ್ಬರನ್ನು ಬೆತ್ತಲೆ ಮೆರವಣಿಗೆ ಮಾಡಲಾಗಿದೆ.

ಇಂಗ್ಲಿಷ್ ಶಿಕ್ಷಕರಾದ ರಾಮ್ ಬಾಬು ಎಂಬಾತ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಹಿಂಸೆ ನೀಡುತ್ತಿದ್ದ.ಇದೀಗಷ್ಟೇ 18 ತುಂಬಿರುವ ವಿದ್ಯಾರ್ಥಿನಿ ಕೆಲವು ದಿನಗಳ ಹಿಂದೆ ಗರ್ಭಿಣಿಯಾಗಿದ್ದಳು. ಆಕೆಗೆ ಈ ಶಿಕ್ಷಕ ಗರ್ಭಪಾತದ ಮಾತ್ರೆ ನೀಡಿದ್ದನು.ವಿದ್ಯಾರ್ಥಿನಿಗೆ ರಕ್ತಸ್ರಾವವಾದಾಗಲೇ ಆಕೆಯ ಮೇಲೆ ಅತ್ಯಾಚಾರ ನಡೆದು ಗರ್ಭಿಣಿಯಾಗಿರುವ ವಿಚಾರ ಮನೆಯವರಿಗೆ ಗೊತ್ತಾಗಿದ್ದು.

ADVERTISEMENT

ಆಮೇಲೆ ಕುಟುಂಬದವರು ಮತ್ತು ಸ್ಥಳೀಯರು ಸೇರಿ ಶಿಕ್ಷಕನನ್ನು ಹಿಡಿದು ಥಳಿಸಿ ಬೆತ್ತಲೆ ಮೆರವಣಿಗೆ ಮಾಡಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.ರಾಮ್ ಬಾಬು ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.