ADVERTISEMENT

ಉತ್ತರ ಪ್ರದೇಶ: ಅತ್ಯಾಚಾರ ಸಂತ್ರಸ್ತೆಯ ತಂದೆಗೆ ಆರೋಪಿಯಿಂದ ಬೆದರಿಕೆ, ಹಲ್ಲೆ 

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2023, 12:16 IST
Last Updated 27 ಮಾರ್ಚ್ 2023, 12:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಭದೋಹಿ (ಉತ್ತರ ಪ್ರದೇಶ): 15 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ, ಸಂತ್ರಸ್ತೆಯ ತಂದೆ ಮೇಲೆ ಹಲ್ಲೆ ನಡೆಸಿದ್ದಾನೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿರುವ ಆರೋಪಿ ಗೋಲು(23), ಶನಿವಾರ ಅತ್ಯಾಚಾರ ಸಂತ್ರಸ್ತೆಯ ತಂದೆಗೆ ಬೆದರಿಕೆ ಹಾಕಿ ಥಳಿಸಿದ್ದಾನೆ. ಪ್ರಕರಣವನ್ನು ಹಿಂಪಡೆಯುವಂತೆ ಒತ್ತಡ ಹೇರಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಚೌರಿ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿ, ಆತನನ್ನು ಮತ್ತೆ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಮನೋಜ್ ಕುಮಾರ್ ಮಾಹಿತಿ ನೀಡಿದ್ದಾರೆ.

ADVERTISEMENT

ಒಂದೂವರೆ ವರ್ಷದ ಹಿಂದೆ ಆರೋಪಿಯು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ.

ಈ ಸಂಬಂಧ ಹೈಕೋರ್ಟ್‌ನಿಂದ ಜಾಮೀನು ಪಡೆದು ಬಾಲಕಿಯ ಗ್ರಾಮಕ್ಕೆ ಬಂದಿದ್ದ ಆರೋಪಿ, ಪ್ರಕರಣವನ್ನು ಹಿಂಪಡೆಯುವಂತೆ ಬಾಲಕಿಗೆ ಬೆದರಿಕೆ ಹಾಕುತ್ತಿದ್ದ. ಈ ವೇಳೆ ಮಧ್ಯಪ್ರವೇಶಿಸಿದ ಸಂತ್ರಸ್ತೆಯ ತಂದೆಗೆ ಥಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.