ADVERTISEMENT

ರಾಜಸ್ಥಾನ: ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥನ ಗುಂಡಿಕ್ಕಿ ಹತ್ಯೆ

ಅಪರಿಚಿತ ದುಷ್ಕರ್ಮಿಗಳಿಂದ ಕೃತ್ಯ

ಪಿಟಿಐ
Published 5 ಡಿಸೆಂಬರ್ 2023, 10:30 IST
Last Updated 5 ಡಿಸೆಂಬರ್ 2023, 10:30 IST
<div class="paragraphs"><p>ಪ್ರಾತಿನಿಧಿ ಚಿತ್ರ</p></div>

ಪ್ರಾತಿನಿಧಿ ಚಿತ್ರ

   

ಜೈಪುರ: ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು(ಮಂಗಳವಾರ) ಮಧ್ಯಾಹ್ನ ಶ್ಯಾಮ್ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಗೊಗಮೆಡಿ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಅವರ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ರಾಜಸ್ಥಾನ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಉಮೇಶ್ ಮಿಶ್ರಾ ಪಿಟಿಐಗೆ ತಿಳಿಸಿದ್ದಾರೆ.

ADVERTISEMENT

‘ಗೊಗಮೆಡಿ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಲ್ಲಿ ಅವರು ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ' ಎಂದು ಜೈಪುರ ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್ ಪಿಟಿಐಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.