ADVERTISEMENT

ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ: ತಪ್ಪಿದ ಅನಾಹುತ

ಪಿಟಿಐ
Published 5 ಅಕ್ಟೋಬರ್ 2025, 7:30 IST
Last Updated 5 ಅಕ್ಟೋಬರ್ 2025, 7:30 IST
<div class="paragraphs"><p>ಏರ್ ಇಂಡಿಯಾ</p></div>

ಏರ್ ಇಂಡಿಯಾ

   

(ಚಿತ್ರ ಕೃಪೆ: ಏರ್ ಇಂಡಿಯಾ)

ಮುಂಬೈ: ಅಮೃತಸರದಿಂದ ಬರ್ಮಿಂಗ್‌ಹ್ಯಾಮ್‌ಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನದ ‘ರ‍್ಯಾಮ್ ಏರ್‌ ಟರ್ಬೈನ್‌’ (ಆರ್‌ಎಟಿ) ಸಾಧನ ನಿಷ್ಕ್ರಿಯಗೊಂಡಿರುವುದನ್ನು ವಿಮಾನದ ಸಿಬ್ಬಂದಿ ಪತ್ತೆ ಹಚ್ಚಿದ್ದಾರೆ. ಆದರೆ, ವಿಮಾನವು ಸುರಕ್ಷಿತವಾಗಿ ಇಳಿದಿದೆ ಎಂದು ಟಾಟಾ ಗ್ರೂಪ್ ಒಡೆತನದ ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

ADVERTISEMENT

ಆದಾಗ್ಯೂ, ವಿಮಾನದಲ್ಲಿದ್ದ ಜನರ ಸಂಖ್ಯೆ ಸೇರಿದಂತೆ ನಿರ್ದಿಷ್ಟ ವಿವರಗಳನ್ನು ವಿಮಾನಯಾನ ಸಂಸ್ಥೆ ಹಂಚಿಕೊಂಡಿಲ್ಲ. ಪ್ರಯಾಣಿಕರ ಅನುಕೂಲಕ್ಕಾಗಿ ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಏರ್ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ.

ರ‍್ಯಾಮ್ ಏರ್‌ ಟರ್ಬೈನ್‌ (ಆರ್‌ಎಟಿ) ಸಾಧನವು ವಿಮಾನವು ಪತನಗೊಳ್ಳುವ ಮುನ್ನ, ಮೂರು ತುರ್ತು ಸಂದರ್ಭಗಳಲ್ಲಿ ಮಾತ್ರ ತೆರೆದುಕೊಳ್ಳುತ್ತದೆ. ಸಾಮಾನ್ಯವಾಗಿ ವಿಮಾನದ ಎರಡೂ ಎಂಜಿನ್‌ಗಳು ವಿಫಲವಾದಾಗ ಅಥವಾ ಎಲೆಕ್ಟ್ರಾನಿಕ್, ಹೈಡ್ರಾಲಿಕ್‌ ವ್ಯವಸ್ಥೆ ವಿಫಲವಾದಾಗ ಮಾತ್ರ ಈ ಸಾಧನ ಸ್ವಯಂಚಾಲಿತವಾಗಿ ಸಕ್ರಿಯವಾಗುತ್ತದೆ.

ಜೂನ್ 12ರಂದು ಅಹಮದಾಬಾದ್‌ನಲ್ಲಿ ಸಂಭವಿಸಿದ್ದ ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವಿಮಾನದ ಎರಡೂ ಎಂಜಿನ್‌ಗಳು ವಿಫಲವಾಗಿರುವುದು ಅಥವಾ ಅದರ ಎಲೆಕ್ಟ್ರಾನಿಕ್ ಅಥವಾ ಹೈಡ್ರಾಲಿಕ್‌ ವ್ಯವಸ್ಥೆಯ ವೈಫಲ್ಯವೇ ಕಾರಣವಿರಬಹುದು ಎಂದು ವರದಿಯಾಗಿದೆ.

ಈ ವಿಮಾನ ಅಹಮದಾಬಾದ್‌ನಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ವೈದ್ಯಕೀಯ ಹಾಸ್ಟೆಲ್ ಸಂಕೀರ್ಣಕ್ಕೆ ಅಪ್ಪಳಿಸಿತ್ತು. ವಿಮಾನದಲ್ಲಿದ್ದ 241 ಜನರು ಸೇರಿದಂತೆ 260 ಮಂದಿ ಸಾವಿಗೀಡಾಗಿದ್ದರು. ವಿಮಾನ ಅಪಘಾತ ತನಿಖಾ ಬ್ಯೂರೊ (ಎಎಐಬಿ) ಅಪಘಾತದ ತನಿಖೆ ನಡೆಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.