ADVERTISEMENT

ಪಶ್ಚಿಮ ಬಂಗಾಳ | ಪಡಿತರ ಹಗರಣ: ಕೋಲ್ಕತ್ತದ ವಿವಿಧಡೆ ಮತ್ತೆ ಇ.ಡಿ ದಾಳಿ

ಪಿಟಿಐ
Published 13 ಫೆಬ್ರುವರಿ 2024, 5:51 IST
Last Updated 13 ಫೆಬ್ರುವರಿ 2024, 5:51 IST
<div class="paragraphs"><p>ಇ.ಡಿ</p></div>

ಇ.ಡಿ

   

ಕೋಲ್ಕತ್ತ: ಬಹುಕೋಟಿ ಪಡಿತರ ಹಗರಣಕ್ಕೆ ಸಂಬಂಧಿಸಿದಂತೆ ಇಂದು (ಮಂಗಳವಾರ) ನಗರದ ಹಲವೆಡೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.


ಕೇಂದ್ರ ಭದ್ರತಾ ಪಡೆಗಳೊಂದಿಗೆ ಇ.ಡಿ ಅಧಿಕಾರಿಗಳು ಸಾಲ್ಟ್ ಲೇಕ್, ಕೈಖಾಲಿ, ಮಿರ್ಜಾ ಗಾಲಿಬ್ ಸ್ಟ್ರೀಟ್, ಹೌರಾ ಸೇರಿದಂತೆ ಕೆಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ADVERTISEMENT

ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧಿಸಲ್ಪಟ್ಟವರನ್ನು ವಿಚಾರಣೆ ನಡೆಸಿದ ವೇಳೆ ಇತರೆ ಕೆಲವರು ಹಗರಣದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಇಂದು ಹಲವೆಡೆ ಶೋಧ ಕಾರ್ಯ ನಡೆಸಲಾಗಿದೆ ಎಂದು ಇ.ಡಿ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಪಡಿತರ ವಿತರಣೆ ಹಗರಣದಲ್ಲಿ ಭಾಗಿಯಾಗಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಸಚಿವ ಹಾಗೂ ತೃಣಮೂಲ ಕಾಂಗ್ರೆಸ್‌ನ ( ಟಿಎಂಸಿ) ಮುಖಂಡರೊಬ್ಬರನ್ನು ಈಗಾಗಲೇ ಬಂಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.