ಅಂಬಾಲಾ: ಹರಿಯಾಣದ ಅಂಬಾಲಾ ಬಿಜೆಪಿ ಸಂಸದ ಹಾಗೂ ಕೇಂದ್ರದ ಮಾಜ ಸಚಿವ ರತನ್ ಲಾಲ್ ಕಟಾರಿಯಾ ಗುರುವಾರ ನಿಧನರಾದರು. ಅವರಿಗೆ 72 ವರ್ಷ ವಯಸ್ಸಾಗಿತ್ತು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹಲವು ದಿನಗಳಿಂದ ಚಂಡೀಗಢದ ಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಬೆಳಗ್ಗೆ ನಿಧರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಆರ್‌ಎಸ್‌ಎಸ್‌ನ ಸಕ್ರಿಯ ಕಾರ್ಯಕರ್ತರಾಗಿದ್ದ ಅವರು ನಾಲ್ಕು ದಶಕಕ್ಕೂ ಹೆಚ್ಚು ಕಾಲ ಆರ್‌ಎಸ್‌ಎಸ್ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಜಲಶಕ್ತಿ ಮತ್ತು ಸಾಮಾಜಿಕ ನ್ಯಾಯ, ಸಬಲೀಕರಣ ರಾಜ್ಯ ಸಚಿವರಾಗಿದ್ದರು. 2021ರಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಕಟಾರಿಯಾ ಅವರ ಪಾರ್ಥಿವ ಶರೀರವನ್ನು ಪಂಚಕುಲದ ನಿವಾಸದಲ್ಲಿ ಇರಿಸಲಾಗಿದ್ದು ಸಾರ್ವಜನಿಕರ ದರ್ಶನ ಪಡೆಯುತ್ತಿದ್ದಾರೆ. ಸಂಜೆ ಮಣಿಮಜ್ರಾದಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುವುದು.
ಕಟಾರಿಯಾ ನಿಧನಕ್ಕೆ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು, ರಾಜಕೀಯ ಮುಖಂಡರು ಕಂಬನಿ ಮಿಡಿದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.