
ನವದೆಹಲಿ: ಕೇರಳದ ಎರಡು ತಾಂತ್ರಿಕ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳ ಆಯ್ಕೆ ಕುರಿತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ರಾಜ್ಯಪಾಲ ಮತ್ತು ಕುಲಪತಿ ರಾಜೇಂದ್ರ ಅರ್ಲೇಕರ್ ಅವರು ಒಮ್ಮತಕ್ಕೆ ಬರದಿದ್ದರೆ, ಈಗಿರುವ ಬಿಕ್ಕಟ್ಟನ್ನು ಪರಿಹರಿಸಲು ಮಧ್ಯಪ್ರವೇಶಿಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.
ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಪಿ.ಬಿ. ವರಾಲೆ ಅವರಿದ್ದ ಪೀಠವು ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ಡಿಜಿಟಲ್ ವಿಜ್ಞಾನ ನಾವೀನ್ಯ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಕುಲಪತಿಗಳ ನೇಮಕಾತಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸಿತು.
ಈ ಬಿಕ್ಕಟ್ಟಿಗೆ ಕೆಲವು ಸೌಹಾರ್ದಯುತ ಪರಿಹಾರ ಕಂಡುಕೊಳ್ಳುವಂತೆ ಪೀಠವು ರಾಜ್ಯಪಾಲರ ಪರವಾಗಿ ಹಾಜರಿದ್ದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಮತ್ತು ಮುಖ್ಯಮಂತ್ರಿ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಜೈದೀಪ್ ಗುಪ್ತಾ ಅವರಿಗೆ ಸೂಚಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.