ADVERTISEMENT

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ರಾಧಾಕೃಷ್ಣ ವಿಖೆ ಪಾಟೀಲ್‌ಗೆ ಸಚಿವ ಸ್ಥಾನ

​ಪ್ರಜಾವಾಣಿ ವಾರ್ತೆ
Published 16 ಜೂನ್ 2019, 10:31 IST
Last Updated 16 ಜೂನ್ 2019, 10:31 IST
   

ಮುಂಬೈ: ಇತ್ತೀಚೆಗೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ರಾಧಾಕೃಷ್ಣ ವಿಖೆ ಪಾಟೀಲ್ ಭಾನುವಾರ ಸಚಿವರಾಗಿಪ್ರಮಾಣ ವಚನ ಸ್ವೀಕರಿಸಿದರು.

ಕಾಂಗ್ರೆಸ್‌ನಲ್ಲಿದ್ದರಾಧಾಕೃಷ್ಣ ವಿಖೆ ಪಾಟೀಲ್ ಮಹಾರಾಷ್ಟ್ರದ ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿ ಜೂನ್‌ 4ರಂದು ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಮುಂಬೈನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿರಾಧಾಕೃಷ್ಣ ವಿಖೆ ಪಾಟೀಲ್ ಹಾಗೂ ಮುಂಬೈ ಬಿಜೆಪಿ ಘಟಕದ ಅಧ್ಯಕ್ಷರಾದ ಆಶೀಸ್‌ ಸೇಲಾರ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ADVERTISEMENT

ಭಾನುವಾರ ನಡೆದ ಸಂಪುಟ ವಿಸ್ತರಣೆಯಲ್ಲಿ 13 ಜನರು ಸಚಿವರಾಗಿದ್ದಾರೆ. 2020ರಲ್ಲಿ ಮಹಾರಾಷ್ಟ್ರದ ವಿಧಾನಸಭೆಗೆ ಚುನಾವಣೆ ನಡೆಯಲಿದೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್‌ ನೇತೃತ್ವದ 38 ಸಚಿವರ ಸಂಪುಟದಲ್ಲಿ 22 ಜನ ಹಿರಿಯರು ಹಾಗೂ 16 ಜನ ಕಿರಿಯ ಸಚಿವರಿದ್ದಾರೆ.

ರಾಧಾಕೃಷ್ಣ ವಿಖೆ ಪಾಟೀಲ್ ಅವರ ಪುತ್ರಸುಜಯ್ ವಿಖೆ ಪಾಟೀಲ್ ಕಳೆದ ಮಾರ್ಚ್‌ ತಿಂಗಳಲ್ಲಿ ಬಿಜೆಪಿ ಸೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.